ರಾಜ್ಯದಲ್ಲಿ ಈಗಾಗಲೇ ಮುಂಗಾರು ಆರ್ಭಟವನ್ನು ಶರು ಮಾಡಿದೆ. ಇನ್ನು ಇಂದು (ಜೂನ್ 08) ಮುಂದಿನ 3 ಗಂಟೆಗಳಲ್ಲಿ ಉಡುಪಿ, ಉತ್ತರ ಕನ್ನಡ ಸೇರಿದಂತೆ ಇಲ್ಲಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿರುಗಾಳಿಯೊಂದಿಗೆ ತೀವ್ರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.