ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲ್ಲಿ ಎಂದು ವ್ಯಕ್ತಿಯೋರ್ವ ತನ್ನ ಬೆರಳನ್ನೇ ಕತ್ತರಿಸಿಕೊಂಡಿರುವ ಘಟನೆ ಛತ್ತೀಸ್ಗಡದ ಬಾಲರಾಮ್ಪುರದಲ್ಲಿ ನಡೆದಿದೆ.
ದುರ್ಗೇಶ್ ಪಾಂಡೆ ಬಿಜೆಪಿ ಬೆಂಬಲಿತನಾಗಿದ್ದು, ಜೂ.4ರಂದು ಚನಾವಣಾ ಫಲಿತಾಂಶ ಹೊರಬಿದ್ದಾಗ ಆರಂಭದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸುತ್ತಿದ್ದಂತೆ ತೀವ್ರ ಬೇಸರಗೊಂಡು, ಎಲ್ಲಿ ಎನ್’ಡಿಎಗೆ ಈ ಬಾರಿ
ಅಧಿಕಾರ ಕೈ ತಪ್ಪಿ ಹೋಗುತ್ತದೆ ಎಂಬ ಆತಂಕಕ್ಕೆಒಳಗಾಗಿ, ಕಾಳಿ ಮಂದಿರಕ್ಕೆ ತೆರಳಿ ಬಿಜೆಪಿ ಗೆಲುವಿಗೆ ಪ್ರಾರ್ಥಿಸಿದ್ದಾನೆ. ಅಲ್ಲದೇ ತನ್ನ ಒಂದು ಬೆರಳನ್ನೇ ಕತ್ತರಿಸಿ ದೇವಿಗೆ ಅರ್ಪಿಸಿದ್ದಾನೆ. ಇದೀಗ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.