ರಾಜ್ಯದಲ್ಲಿ ಎಲ್ಲ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಕಡ್ಡಾಯವಾಗಿ ಅಳವಡಿಸಲು ಎರಡೇ ದಿನ ಗಡುವು ನೀಡಲಾಗಿದೆ.
ಈ ಹಿಂದೆ ಫೆಬ್ರವರಿ 17ಕ್ಕೆ ಇದ್ದ ನೋಂದಣಿ ಗಡುವನ್ನು ರಾಜ್ಯ ಸರ್ಕಾರ ಮೇ 31ಕ್ಕೆ ವಿಸ್ತರಣೆ ಮಾಡಿತ್ತು. ಬಳಿಕ ಜೂ.12ರವರೆಗೆ ಗಡುವು ನೀಡಿದ್ದು, ಇನ್ನೆರಡು ದಿನದಲ್ಲಿ ಮುಕ್ತಾಯವಾಗಲಿದೆ. ನೋಂದಣಿ ಮಾಡಿಸಿಕೊಳ್ಳದ ವಾಹನ ಸವಾರರ ವಿರುದ್ಧ ಕ್ರಮ ಜರುಗಿಸುವ ತೀರ್ಮಾನಕ್ಕೆ ಸಾರಿಗೆ ಇಲಾಖೆ ಬಂದಿದೆ. ಮೊದಲ ಬಾರಿಗೆ ಸಿಕ್ಕಿಬಿದ್ದರೆ 500 ರೂ ದಂಡ, 2ನೇ ಬಾರಿ ಸಿಕ್ಕಿಬಿದ್ದರೆ 1000 ರೂಗೆ ಏರಿಕೆ ಮಾಡುವ ನಿಟ್ಟಿನಲ್ಲಿ ನಿರ್ಧಾರವನ್ನು ತೆಗೆದುಕೊಳ್ಳಲು ಚಿಂತಿಸಲಾಗಿದೆ ಎನ್ನಲಾಗಿದೆ.