ರಾಜ್ಯದಲ್ಲಿ ಹಲವೆಡೆ ಉತ್ತಮ ಮಳೆ ಆಗಿದ್ದು, ರೈತರ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರವನ್ನು ವಿತರಿಸಲಾಗುತ್ತದೆ. ಹಾಗೆಯೇ ಕೃಷಿ ಸಂಬಂಧಿತ ಸೌಲಭ್ಯವನ್ನು ಪಡೆಯಲು ರೈತರು ಕಡ್ಡಾಯವಾಗಿ ಪ್ರೂಟ್ ಐಡಿ ಹೊಂದಿರುವುದು ಕಡ್ಡಾಯವಾಗಿದೆ.
ರಾಜ್ಯದಲ್ಲಿ ಹಲವೆಡೆ ಉತ್ತಮ ಮಳೆಯಾದ ಕಾರಣ ಹಲವೆಡೆ ಬಿತ್ತನೆ ಆರಂಭಿಸಿದ್ದಾರೆ. ಸುಮಾರು ಶೇ. 36 ರಷ್ಟು ಕೃಷಿ ಭೂಮಿ ಬಿತ್ತನೆ ಆಗಿದೆ. ಉಳಿದ ರೈತರು ಬಿತ್ತನೆ ಮಾಡುತ್ತಿದ್ದಾರೆ. ಎಲ್ಲ ರೈತರಿಗೆ ಅವರ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರಗಳನ್ನು ಪೂರೈಸಲು ಕೃಷಿ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಲಾಗುತ್ತದೆ.
ಸರ್ಕಾರದಿಂದ ವಿವಿಧ ಸೌಲಭ್ಯಗಳನ್ನು ಪಡೆಯಲು ಎಲ್ಲಾ ರೈತರು ಪ್ರೂಟ್ ಐಡಿ ಹೊಂದುವುದು ಅಗತ್ಯವಾಗಿದೆ. ಈಗಾಗಲೇ ಶೇ. 76 ರಷ್ಟು ರೈತರು ಪ್ರೂಟ್ ಐಡಿ ಹೊಂದಿದ್ದಾರೆ. ಉಳಿದ ರೈತರು ಪ್ರೂಟ್ ಐಡಿ ಹೊಂದುವಂತೆ ಸೂಚಿಸಲಾಗಿದೆ.