ಅಂಚೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಯ ವಿವರ:
* ಗ್ರಾಮೀಣ ಡಾಕ್ ಸೇವಕ್
* ಬ್ರಾಂಚ್ ಪೋಸ್ಟ್ ಮಾಸ್ಟರ್
* ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್
ಹುದ್ದೆಯ ಸಂಖ್ಯೆ:
50,000
ಅರ್ಹತೆ:
ಎಸ್.ಎಸ್.ಎಲ್.ಸಿ ಅಂಕಗಳ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 40 ವರ್ಷದೊಳಗಿನವರಿಗಿರಬೇಕು. ಮೀಸಲಾತಿಯ ಆಧಾರದ ಮೇಲೆ ವಯಸ್ಸಿನ ಸಡಿಲಿಕೆಯೂ ಇದೆ.
ಅರ್ಜಿ ಸಲ್ಲಿಸುವ ವಿಧಾನ
ಭಾರತೀಯ ಅಂಚೆ ಇಲಾಖೆಯ ವೆಬ್ ಸೈಟ್ https://indiapostgdsonline.gov.in/ ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸತಕ್ಕದ್ದು. ಆಯ್ಕೆಯಾಗುವ ಅಭ್ಯರ್ಥಿಗಳ ವಿವರವನ್ನೂ ಈ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ.
ದೇಶಾದ್ಯಂತ ಸುಮಾರು 50,000 ಹುದ್ದೆಗಳಿಗೆ ಭಾರತೀಯ ಅಂಚೆ ಇಲಾಖೆಯು ಅರ್ಜಿಯನ್ನು ಆಹ್ವಾನಿಸಲಿದ್ದು, ಶೀಘ್ರದಲ್ಲೇ ಅಧಿಸೂಚನೆ ಬಿಡುಗಡೆಯಾಗುವ ಸಾಧ್ಯತೆ ಇದೆ.