ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಇಂದು ಭಾರತ vs ಆಸ್ಟ್ರೇಲಿಯಾ ನಡುವೆ ನಿರ್ಣಾಯಕ ಪಂದ್ಯ

On: June 24, 2024 10:28 AM
Follow Us:
---Advertisement---

ಟಿ20 ವಿಶ್ವಕಪ್​ನ ಸೂಪರ್-8 ಪಂದ್ಯದಲ್ಲಿ ಇಂದು ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ಸೇಂಟ್ ಲೂಸಿಯಾದ ಡಾರೆನ್ ಸ್ಯಾಮಿ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ.

ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಟೀಮ್ ಇಂಡಿಯಾ ಸೆಮಿಫೈನಲ್​ಗೇರಲಿದೆ. ಅತ್ತ ಆಸ್ಟ್ರೇಲಿಯಾ ತಂಡವು ಸೆಮಿಫೈನಲ್​ನಲ್ಲಿ ರೇಸ್​ನಲ್ಲಿ ಉಳಿಯಬೇಕಿದ್ದರೆ ಈ ಪಂದ್ಯದಲ್ಲಿ ಜಯ ಸಾಧಿಸಬೇಕು. ಒಂದು ವೇಳೆ ಇಂದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಟೀಮ್ ಇಂಡಿಯಾ ವಿರುದ್ಧ 50 ಕ್ಕಿಂತ ಹೆಚ್ಚಿನ ರನ್​ಗಳ ಅಂತರದಿಂದ ಜಯ ಸಾಧಿಸಿದರೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ. ಪ್ರಸ್ತುತ ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ಅಗ್ರಸ್ಥಾನದಲ್ಲಿದೆ. +2.425 ನೆಟ್​ ರನ್​ ರೇಟ್​ನೊಂದಿಗೆ 4 ಅಂಕಗಳನ್ನು ಕಲೆಹಾಕಿರುವ ಭಾರತ ತಂಡವು ಅಗ್ರಸ್ಥಾನವನ್ನು ಕಾಯ್ದುಕೊಳ್ಳಲು ಇಂದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಜಯ ಸಾಧಿಸಬೇಕು.

ಒಂದು ವೇಳೆ ಸೋಲುವ ಪರಿಸ್ಥಿತಿ ಎದುರಾದರೆ ಹೀನಾಯ ಸೋಲನ್ನು ತಪ್ಪಿಸಿಕೊಳ್ಳಬೇಕು. ಈ ಮೂಲಕ ನೆಟ್ ರನ್ ರೇಟ್​ ಸಹಾಯದಿಂದ ಅಗ್ರಸ್ಥಾನವನ್ನು ಕಾಯ್ದುಕೊಳ್ಳಬಹುದು. ಈ ಮೂಲಕ ನೇರವಾಗಿ ಸೆಮಿಫೈನಲ್​ಗೇರಬಹುದು.

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್-ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ , ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್. ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಆಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ.

Join WhatsApp

Join Now

Join Telegram

Join Now

Leave a Comment