ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

EXCLUSIVE: ಸಂಸತ್ ಭವನದ ಮುಂದೆ ಸಚಿವ ಎಸ್. ಎಸ್. ಎಂ., ಪ್ರಭಾ ಮಲ್ಲಿಕಾರ್ಜುನ್ ಫ್ಯಾಮಿಲಿ ಸೆಲ್ಫಿ…!

On: June 24, 2024 10:01 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:24-06-2024

ದಾವಣಗೆರೆ: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಸಂಸತ್ ನಲ್ಲಿ ದಾವಣಗೆರೆಯ ಮೊದಲ ಮಹಿಳಾ ಲೋಕಸಭಾ ಸದಸ್ಯೆ ಎಂಬ ಕೀರ್ತಿಗೆ ಪಾತ್ರರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಕುಟುಂಬವು ಸಂಸತ್ ಭವನದ ಮುಂದೆ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿತು.

ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಡಾ. ಪ್ರಭಾ ಮಲ್ಲಿಕಾರ್ಜುನ್, ಪುತ್ರರಾದ ಸಮರ್ಥ, ಶಿವ, ಪುತ್ರಿ ಶ್ರೇಷ್ಠಾ ಅವರು ಸೆಲ್ಫಿ ತೆಗೆದುಕೊಂಡು ಖುಷಿ ಪಟ್ಟರು. ಇನ್ನು ತಾಯಿ ಪ್ರಭಾ ಮಲ್ಲಿಕಾರ್ಜುನ್ ಅವರು ಪ್ರಮಾಣ ವಚನ ಸ್ವೀಕರಿಸುವುದನ್ನು ಗಳು ಸಂಸದರ ಫ್ಯಾಮಿಲಿ ಗ್ಯಾಲರಿಯಲ್ಲಿ ಕುಳಿತು ಪುತ್ರರಾದ ಸಮರ್ಥ್, ಶಿವ, ಪುತ್ರಿ ಶ್ರೇಷ್ಠಾ ಅವರು ವೀಕ್ಷಿಸಿದರು.

ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲು ಕಾರಣೀಕರ್ತರಾದ ದಾವಣಗೆರೆ ಲೋಕಸಭಾ ಕ್ಷೇತ್ರದ ಸಮಸ್ತ ಮತ ಬಾಂಧವರಿಗೂ, ಪಕ್ಷದ ಶಾಸಕರು, ಮಾಜಿ ಶಾಸಕರು, ಜಿಲ್ಲಾ ಅಧ್ಯಕ್ಷರು, ಚುನಾಯಿತ ಪ್ರತಿನಿಧಿಗಳು, ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರು, ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು, ವಿವಿಧ ಸಂಘಟನೆಗಳ ಮುಖಂಡರು, ಎಲ್ಲಾ ಸಮಾಜಗಳ ಬಾಂಧವರು, ಪಕ್ಷದ ಮುಖಂಡರು, ಕಾರ್ಯಕರ್ತರು, ಹಿತೈಷಿಗಳಿಗೂ ಹಾಗೂ ಮಾಧ್ಯಮ ಮಿತ್ರರಿಗೆ ಹೃದಯಪೂರ್ವಕ ಧನ್ಯವಾದ ಸಲ್ಲಿಸುತ್ತೇನೆ ಎಂದು ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ತಿಳಿಸಿದ್ದಾರೆ.

ಪ್ರಭಾ ಮಲ್ಲಿಕಾರ್ಜುನ್ ಅವರು ಪ್ರಮಾಣ ಸ್ವೀಕರಿಸುತ್ತಿರುವುದನ್ನು ಸಚಿವ ಮಲ್ಲಿಕಾರ್ಜುನ್, ಪುತ್ರರಾದ ಸಮರ್ಥ, ಶಿವ, ಪುತ್ರಿ ಶ್ರೇಷ್ಠಾ ಅವರಲ್ಲಿ ಸಂಭ್ರಮ ಮನೆ ಮಾಡಿತ್ತು. ದಾವಣಗೆರೆಯ ಸಚಿವ ಮಲ್ಲಿಕಾರ್ಜುನ್ ರ ಮನೆಯಲ್ಲಿ ಶಾಸಕರು, ಮಾಜಿ ಸಂಸದರೂ ಆದ ಡಾ. ಶಾಮನೂರು ಶಿವಶಂಕರಪ್ಪನವರು ಸಹ ದೂರದರ್ಶನದಲ್ಲಿ ವೀಕ್ಷಿಸಿ ಹರ್ಷ ವ್ಯಕ್ತಪಡಿಸಿದರು. ಇವರೊಂದಿಗೆ ಉದ್ಯಮಿ ಅಣಬೇರು ರಾಜಣ್ಣ ಇದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment