ಮಂಗಳೂರು : ಗಾಂಜಾ ಸೇವನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಗರ್, ಪ್ರಸನ್ನ ಕಾಮತ್ ಮತ್ತು ಅಜಯ್ ಎಂಬವನ್ನು ಕಂಕನಾಡಿ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿಚಾರಣೆ ಮಾಡುವ ವೇಳೆ ಮಾದಕ ವಸ್ತು ಸೇವಿಸಿರುವ ಬಗ್ಗೆ ತಿಳಿದು ಬಂದಿದ್ದು, ಗಾಂಜಾ ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ವೈದ್ಯಕೀಯ ತಪಾಸಣೆ ನಡೆಸಿದಾಗ ಗಾಂಜಾ ಹಾಗೂ ನಿಷೇಧಿತ ಮಾದಕ ವಸ್ತುಗಳನ್ನು ಸೇವನೆ ಮಾಡಿರುವುದು ದೃಢಪಟ್ಟಿದೆ.
ಈ ಬಗ್ಗೆ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.