ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಗ್ರಾಮ ಪಂಚಾಯತ್ ನೇರ ನೇಮಕಾತಿ-2024: ಖಾಲಿ ಇರುವ 16 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

On: July 1, 2024 11:05 AM
Follow Us:
---Advertisement---

Gramapanchayti Jobs: ಉದ್ಯೋಗದ ನಿರೀಕ್ಷೆಯಲ್ಲಿರುವ ಹಲವಾರು ಯುವಕ ಯುವತಿಯರಿಗೆ ದಾವಣಗೆರೆ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಪಂಚಾಯ್ತಿಯಲ್ಲಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ನೀಡಲಾಗಿದೆ. ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಸಲ್ಲಿಸಿ ಇದರ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಈ ಮಾಹಿತಿಯನ್ನು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ.

ಕೆಲಸದ ಸ್ಥಳ: ದಾವಣಗೆರೆ
ಹುದ್ದೆಗಳು: 16
ಹುದ್ದೆಗಳ ವಿವರ :ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರರಾಗಿ

ಈ ಹುದ್ದೆಗೆ ಸೇರಲು ಅರ್ಹತೆ: ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪಾಸ್ ಆಗಿದ್ದು ಅದರ ಜೊತೆಗೆ ಸರ್ಟಿಫಿಕೇಶನ ಇನ್ ಲೈಬ್ರರಿ ಕೋರ್ಸ್ ಪ್ರಮಾಣ ಪತ್ರ ಹೊಂದಿರಬೇಕು

ಈ ಹುದ್ದೆಗೆ ಸಂಬಳ ಎಷ್ಟಿದೆ?
ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ವ್ಯವಸ್ಥಾಪಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ರೂ.15196 ಸಂಭಾವನೆ ಪಡೆಯುತ್ತಾರೆ. ಮಾಸಿಕ ವೇತನ ನೀಡಲಾಗುತ್ತದೆ. ನೀವು ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದರೆ, ನೀವು ತಕ್ಷಣ ಕೆಳಗೆ ನೀಡಲಾದ ಲಿಂಕ್ ಬಳಸಿ ನೀವು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಸೂಚನೆಗಳು:-
1) ಆಯಾ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ವಾಸಿಸುವ ಅರ್ಹ ಅಭ್ಯರ್ಥಿಗಳನ್ನು ಮೊದಲ ಆದ್ಯತೆ ಮೇರೆಗೆ ಪರಿಗಣಿಸಲಾಗುವುದು. ಒಂದು ವೇಳೆ ಅದೇ ಗ್ರಾಮ ಪಂಚಾಯತಿಯ ಅರ್ಹ ಅಭ್ಯರ್ಥಿ ಲಭ್ಯವಿಲ್ಲದಿದ್ದಲ್ಲಿ ಆಯಾ ತಾಲ್ಲೂಕು ಪಂಚಾಯತಿ ವ್ಯಾಪ್ತಿಯಲ್ಲಿನ ಬೇರೆ ಗ್ರಾಮ ಪಂಚಾಯತಿ ಅಭ್ಯರ್ಥಿಗಳನ್ನು ಎರಡನೇ ಆದ್ಯತೆ ಮೇರೆಗೆ ಆಯ್ಕೆಗೆ ಪರಿಗಣಿಸಲಾಗುವುದು.
2) ನೇಮಕಾತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನುಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ಕಡ್ಡಾಯವಾಗಿ ಪಡೆದಿರತಕ್ಕದ್ದು.
3) ಖಾಲಿ ಹುದ್ದೆ ಮತ್ತು ಇತರೆ ವಿವರಗಳಿಗಾಗಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಬೇಕು.

ಅರ್ಜಿ ಸಲ್ಲಿಸುವ ಲಿಂಕ್: https://davanagere.nic.in/en/notice/recruitment/
ಅರ್ಜಿಸಲ್ಲಿಸುವ ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜೂನ್ 29, 2024 ರಿಂದ ಆರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 20, 2024

Join WhatsApp

Join Now

Join Telegram

Join Now

Leave a Comment