ನವದೆಹಲಿ : ಬಾರ್ಬಡೋಸ್ ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಎರಡನೇ ಬಾರಿಗೆ ಟಿ೨೦ ವಿಶ್ವಕಪ್ ಗೆದ್ದ ಟೀಂ ಇಂಡಿಯಾ ಆಟಗಾರರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಭಾರತ ಕ್ರಿಕೆಟ್ ತಂಡ ದೆಹಲಿಯ ಲೋಕ ಕಲ್ಯಾಣ ಮಾರ್ಗದ ಮೋದಿ ನಿವಾಸಕ್ಕೆ ಆಗಮಿಸಿದೆ. ಎರಡನೇ ಟಿ 20 ಐ ಪ್ರಶಸ್ತಿಯನ್ನು ಗೆದ್ದ ನಂತರ ಟೀಮ್ ಇಂಡಿಯಾ ಇಂದು ಬೆಳಿಗ್ಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.