ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಇಂದಿನಿಂದ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸ

On: July 8, 2024 11:14 AM
Follow Us:
---Advertisement---

ರಷ್ಯಾ: ಉಕ್ರೇನ್​, ರಷ್ಯಾ ಯುದ್ಧ ಆರಂಭವಾದ ಬಳಿಕ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸ ಕೈಗೊಂಡಿದ್ದಾರೆ.

ಸೋಮವಾರ, ಮಂಗಳವಾರ ರಷ್ಯಾದಲ್ಲಿ ಹಲವು ಸುತ್ತಿನ ಮಾತುಕತೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬುಧವಾರ ಆಸ್ಟ್ರಿಯಾಕ್ಕೆ ತೆರಳಲಿರುವ ಪ್ರಧಾನಿ, ಗುರುವಾರದವರೆಗೂ ಅಲ್ಲಿರಲಿದ್ದಾರೆ. 46 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಆಸ್ಟ್ರಿಯಾ ಪ್ರವಾಸ ಕೈಗೊಳ್ಳುತ್ತಿರುವುದು ಇದೇ ಮೊದಲು.

ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯು ಮೋದಿಯವರ ರಷ್ಯಾ ಭೇಟಿಯ ಪ್ರಮುಖ ಅಜೆಂಡಾವಾಗಿದೆ. ರಷ್ಯಾ-ಉಕ್ರೇನ್ ಸಂಘರ್ಷದ ನಂತರದ ಮೊದಲ ಭೇಟಿಯಲ್ಲಿ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಈ ವಿಷಯದ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ನರೇಂದ್ರ ಮೋದಿ ಅವರಿಗೆ ಔತಣಕೂಟ ಏರ್ಪಡಿಸಲಿದ್ದಾರೆ. ನಾಳೆ ಶೃಂಗಸಭೆ ನಡೆಯಲಿದ್ದು, ಇದರಲ್ಲಿ ಉಭಯ ನಾಯಕರು ಭಾಗವಹಿಸಲಿದ್ದಾರೆ.

ಉಭಯ ದೇಶಗಳ ನಡುವಿನ ಸಂಬಂಧವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಈ ಭೇಟಿ ಸಹಕಾರಿಯಾಗಲಿದೆ. 22ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ವಿಶೇಷ ಆಹ್ವಾನದ ಮೇರೆಗೆ ಪ್ರಧಾನಿ ಇಂದು ರಷ್ಯಾಕ್ಕೆ ಭೇಟಿ ನೀಡುತ್ತಿದ್ದಾರೆ.

Join WhatsApp

Join Now

Join Telegram

Join Now

Leave a Comment