ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಭಾರತ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆ

On: July 10, 2024 10:54 AM
Follow Us:
---Advertisement---

ಮುಂಬೈ: ಗೌತಮ್ ಗಂಭೀರ್ ಅವರು ಭಾರತ ತಂಡದ ಮುಖ್ಯ ಕೋಚ್ ಆಗಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಚಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಜಯ್ ಶಾ ಅವರು, ನ ಕೋಚ್ ಗೌತಮ್ ಗಂಭೀರ್ ಅವರಿಗೆ ಸ್ವಾಗತ ಎಂದು ಬರೆದುಕೊಂಡಿದ್ದಾರೆ. ಟಿ20 ವಿಶ್ವಕಪ್ ಮುಕ್ತಾಯವಾದ ಬೆನ್ನಲ್ಲೇ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಮುಗಿದಿದೆ. ಈ ಹಿನ್ನೆಲೆ ನೂತನ ಕೋಚ್ ಆಗಿ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ ಆಯ್ಕೆಯಾಗಿದ್ದಾರೆ.

ಇನ್ನು ಟೀಂ ಇಂಡಿಯಾದ ಕೋಚ್ ಆಗಿ ಬಿಸಿಸಿಐ ಅಧಿಕೃತವಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಗೌತಮ್ ಗಂಭೀರ್ ಸಾಮಾಜಿಕ ಜಾಲತಾಣಗಳ ಮೂಲಕ ಪ್ರತಿಕ್ರಿಯಿಸಿದ್ದು, ಭಾರತವು ನನ್ನ ಗುರುತಾಗಿದೆ. ಮತ್ತು ನನ್ನ ದೇಶಕ್ಕೆ ಸೇವೆ ಸಲ್ಲಿಸುವುದು ನನ್ನ ಜೀವನದ ದೊಡ್ಡ ಅವಕಾಶ. ಬೇರೆ ಟೋಪಿ ಧರಿಸಿದ್ದರೂ ನಾನು ಹಿಂತಿರುಗಿದ್ದಕ್ಕೆ ನನಗೆ ಗೌರವವಿದೆ. ಆದರೆ ನನ್ನ ಗುರಿ ಮೊದಲಿನಂತೆಯೇ ಇದೆ, ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವಂತೆ ಮಾಡುವುದು. ಬ್ಲ್ಯೂ ಬಾಯ್ಸ್ 1.4 ಬಿಲಿಯನ್ ಭಾರತೀಯರ ಕನಸುಗಳನ್ನು ನನಸಾಗಿಸುತ್ತಾರೆ ಮತ್ತು ಈ ಕನಸುಗಳನ್ನು ನನಸಾಗಿಸಲು ನಾನು ನನ್ನ ಶಕ್ತಿಯಿಂದ ಎಲ್ಲವನ್ನೂ ಮಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ.

Join WhatsApp

Join Now

Join Telegram

Join Now

Leave a Comment