SUDDIKSHANA KANNADA NEWS/ DAVANAGERE/ DATE:07-07-2023
ದಾವಣಗೆರೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (Karnataka State Open University) ದ 2022-23 ನೇ ಶೈಕ್ಷಣಿಕ ಸಾಲಿನ (ಜುಲೈ ಆವೃತ್ತಿ) ಪ್ರಥಮ ವರ್ಷದ ವಿವಿಧ ಕೋರ್ಸ್ಗಳ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬಿ.ಎ, ಬಿ.ಕಾಂ, ಬಿ.ಎಸ್.ಸಿ, ಬಿ.ಲಿಬ್.ಐ.ಎಸ್ಸಿ, ಬಿ.ಸಿ.ಎ., ಬಿ.ಬಿ.ಎ., ಬಿ.ಎಸ್.ಡಬ್ಲೂ, ಎಂ.ಎ, ಎಂ.ಕಾಂ, ಎಂ.ಎ.-ಎಂ.ಸಿ.ಜೆ., ಎಂ.ಲಿಬ್.ಐ.ಎಸ್ಸಿ, ಎಂ.ಬಿ.ಎ., ಎಂ.ಎಸ್.ಸಿ., ಎಂ.ಸಿ.ಎ., ಎಂ.ಎಸ್.ಡಬ್ಲೂ., ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ಮತ್ತು ಪಿ.ಜಿ-ಡಿಪ್ಲೊಮಾ, ಡಿಪ್ಲೋಮಾ, ಸರ್ಟಿಫಿಕೇಟ್ ಕೋರ್ಸಗಳಿಗೆ ಅರ್ಜಿ ಆಹ್ವಾನಿಸಿದ್ದು, ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿನಿಯರಿಗೆ, ಡಿಫೆನ್ಸ್ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ ಮತ್ತು ಆಟೋ, ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ರಿಯಾಯಿತಿ ಹಾಗೂ ಕೋವಿಡ್-19 ನಿಂದ ಮೃತಪಟ್ಟವರ ಮಕ್ಕಳು, ತೃತೀಯ ಲಿಂಗಿಗಳು, ದೃಷ್ಟಿಹೀನ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ಇರುತ್ತದೆ.
ಅಲ್ಲದೆ ಎರಡು ಶೈಕ್ಷಣಿಕ ಕೋರ್ಸುಗಳನ್ನು ಏಕಕಾಲದಲ್ಲಿ ಒಂದು ಭೌತಿಕ ಕ್ರಮದಲ್ಲಿ ಮತ್ತೊಂದು ದೂರಶಿಕ್ಷಣ ಕ್ರಮದಲ್ಲಿ ಓದಲು ಅವಕಾಶವಿದೆ. ಆಸಕ್ತ ಅಭ್ಯರ್ಥಿಗಳು ಕರಾಮುವಿಯ ಅಧಿಕೃತ ವೆಬ್ಸೈಟ್ ನ ಆನ್ಲೈನ್ ಅಡ್ಮಿಶನ್ ಪೋರ್ಟಲ್ ಮೂಲಕ ಅರ್ಜಿಯನ್ನು ಭರ್ತಿ ಮಾಡಿ, ದಾವಣಗೆರೆ ಪ್ರಾರ್ದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಆನ್ಲೈನ್ ಮುಖಾಂತರ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆದುಕೊಳ್ಳಬೇಕು.
ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಮೊ. ಸಂ : 8690544544, 8800335638, ಮೊ.ನಂ. 9916009318, 8095939359 ಅಥವಾ ಜಿ.ಹೆಚ್.ಪಟೇಲ್ ಬಡಾವಣೆಯಲ್ಲಿರುವ ಕ.ರಾ.ಮು.ವಿ. ಪ್ರಾದೇಶಿಕ ಕೇಂದ್ರ, ಕಛೇರಿಯನ್ನು ಸಂಪರ್ಕಿಸಲು ಪ್ರಾದೇಶಿಕ ನಿರ್ದೇಶಕರಾದ ಡಾ.ವಿಜಯ್ ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.