ಉಡುಪಿ: ನಗರದ ಅಂಬಲಪಾಡಿ ಮುಖ್ಯ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಪತಿ ಸಾವನ್ನಪ್ಪಿ ಅವರ ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಅಂಬಲಪಾಡಿ ಶೆಟ್ಟಿ ಬಾರ್ ಆಂಡ್ ರೆಸ್ಟೋರೆಂಟ್ ಮಾಲಕ ರಮಾನಂದ (52) ಮೃತ ದುರ್ದೈವಿ.
ಘಟನೆಯಲ್ಲಿ ಮನೆಯು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಮನೆಯೊಳಗೆ ಸಿಲುಕಿದ್ದ ರಮಾನಂದ ಅವರು ಸಾವನ್ನಪ್ಪಿ ಅವರ ಪತ್ನಿ ಅಶ್ವಿನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಮನೆಯೊಳಗೆ ಸಿಲುಕಿದ್ದ ಮಕ್ಕಳನ್ನು ರಕ್ಷಣೆ ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ಪೋಲಿಸ್ ತಂಡ ಆಗಮಿಸಿ ಕಾರ್ಯಾಚರಣೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಪತ್ನಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಮನೆಯಲ್ಲಿದ್ದ ಎಸಿ ಯೂನಿಟ್ ಸ್ಫೋಟಗೊಂಡು ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ.