SUDDIKSHANA KANNADA NEWS/ DAVANAGERE/ DATE:18-07-2024
ದಾವಣಗೆರೆ: ದಾವಣಗೆರೆ ಜಿಲ್ಲೆಯ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು ಮತ್ತು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ರೋಸ್ಟರ್ ಕಂ ಮೇರಿಟ್ ಆಧಾರದ ಮೇಲೆ ನೇಮಕಾತಿ ಮಾಡಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜುಲೈ 30 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಅರ್ಜಿದಾರರು ನಿಗದಿತ ಅರ್ಜಿ ನಮೂನೆಯನ್ನು ಪಡೆದು ವಿದ್ಯಾರ್ಹತೆ ಮತ್ತು ಮೀಸಲಾತಿ ಅರ್ಹತಾ ಮೂಲ ದಾಖಲೆಗಳ ಪರಿಶೀಲನೆ ಮಾಡಿಸಿ, ಅರ್ಹತಾ ದಾಖಲೆಗಳ ಒಂದು ಸೆಟ್ ದೃಢೀಕೃತ ಜೆರಾಕ್ಸ್ ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.
ಹುದ್ದೆಯ ವಿವರ: ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ 2 ಹುದ್ದೆ, ಮಕ್ಕಳ ತಜ್ಞರು 1 ಹುದ್ದೆ, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು 1 ಹುದ್ದೆ, ಅರವಳಿಕೆ ತಜ್ಞರು 2 ಹುದ್ದೆ, ನೇತ್ರ ತಜ್ಞರು 1 ಹುದ್ದೆ, ಕಿವಿ ಮೂಗು ಗಂಟಲು ತಜ್ಞರು 1 ಹುದ್ದೆ, ಫಿಜಿಷಿಯನ್ 1 ಹುದ್ದೆ. ಹೆಚ್ಚಿನ ಮಾಹಿತಿಗಾಗಿ ಈ ಕಚೇರಿ ಸೂಚನಾ ಫಲಕ ವೀಕ್ಷಣೆ ಅಥವಾ ಜಿಲ್ಲಾಧಿಕಾರಿಗಳ ಕಚೇರಿ ಅಂತರ್ಜಾಲವನ್ನು (davanagere.nic.in) ಸಂಪರ್ಕಿಸಲು ಜಿಲ್ಲಾ ಆರೋಗ್ಯ ಮತ್ತು ಕು.ಕ.ಅಧಿಕಾರಿ ಡಾ.ಷಣ್ಮುಖಪ್ಪ ತಿಳಿಸಿದ್ದಾರೆ.