SUDDIKSHANA KANNADA NEWS/ DAVANAGERE/ DATE:19-07-2024
ಬೆಂಗಳೂರು: ವಾಲ್ಮಿಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದ್ದು, ಎಸ್ಐಟಿ ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆಯಿದೆ. ರಾಜ್ಯ ಸರ್ಕಾರಕ್ಕೆ ಹಾಗೂ ತನಗೆ ಮಸಿ ಬಳಿಯುವ ಪ್ರಯತ್ನವನ್ನು ವಿರೋಧಪಕ್ಷಗಳು ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿಡಿಕಾರಿದರು.
ಅವರು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ವಾಲ್ಮಿಕಿ ಅಭಿವೃದ್ಧಿ ನಿಗಮದ ಅಕೌಂಟ್ ಸುಪರಿಡೆಂಟ್ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡ ದಿನವೇ ಅವರ ಪತ್ನಿ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ. ಮೇ 31ರಂದು ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದ್ದು, ಇದರಲ್ಲಿ ನಾಲ್ಕು ಮಂದಿ ಹಿರಿಯ ಐಪಿಎಸ್ ಅಧಿಕಾರಿಗಳು ಇದ್ದಾರೆ ಎಂದರು.
ಯೂನಿಯನ್ ಬ್ಯಾಂಕ್ ಅಫ್ ಇಂಡಿಯಾದ ಅಧಿಕಾರಿ ಮಹೇಶ್ ಎಂಬವರ ದೂರಿನ ಮೇರೆಗೆ ಸಿಬಿಐ ತನಿಖೆಯನ್ನು ಕೈಗೊಂಡಿದ್ದು, ಇಡಿ ಸ್ವಯಂ ಪ್ರೇರಿತವಾಗಿ ತನಿಖೆಯನ್ನು ನಡೆಸುತ್ತಿದೆ. ಎಸ್ಐಟಿ ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿಯನ್ನು ಬಂಧಿಸಿದ್ದು, 34 ಕೋಟಿ ರೂ. ನಗದು ವಶಪಡಿಸಿಕೊಂಡಿದೆ. ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದ್ದ ಸುಮಾರು ರೂ. 46 ಕೋಟಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದರು.
ಪ್ರಕರಣದಲ್ಲಿ ಯಾವುದೇ ಅಕ್ರಮ ಆಗಿಲ್ಲ ಎಂದು ನಾವು ಹೇಳುತ್ತಿಲ್ಲ. ಅಕ್ರಮ ಎಸಗಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಸರ್ಕಾರ ಬದ್ಧವಾಗಿದೆ. ವಿಧಾನಮಂಡಲ ಅಧಿವೇಶನದಲ್ಲಿ ವಿರೊಧ ಪಕ್ಷಗಳ ಸದಸ್ಯರು ನಿಯಮ 69ರ ಅಡಿಯಲ್ಲಿ 7ತಾಸಿಗೂ ಅಧಿಕ ಕಾಲ ಈ ವಿಚಾರದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದ್ದಾರೆ. ಸಂಸದೀಯ ವ್ಯವಸ್ಥೆಯಲ್ಲಿ ವಿರೋಧ ಪಕ್ಷಗಳಿಗೆ ಅಭಿಪ್ರಾಯ ವ್ಯಕ್ತಪಡಿಸಲು ಇರುವ ಅವಕಾಶದಷ್ಟೇ, ಸರ್ಕಾರಕ್ಕೂ ತನ್ನ ನಿಲುವು ವ್ಯಕ್ತಪಡಿಸಲು ಹಕ್ಕಿದೆ ಎಂದು ಹೇಳಿದರು.
ವಾಲ್ಮಿಕಿ ಅಭಿವೃದ್ಧಿ ನಿಗಮದ 89.63 ಕೋಟಿ ರೂ. ಹಣವನ್ನು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂಜಿ ರಸ್ತೆ ಖಾತೆಗೆ ವರ್ಗಾಯಿಸಿ ಅಲ್ಲಿಂದ ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ರಾಷ್ಟ್ರೀಕೃತ ಬ್ಯಾಂಕ್ ಆಗಿದ್ದು, ಕೇಂದ್ರ ಹಣಕಾಸು ಇಲಾಖೆ ಅಧೀನಕ್ಕೆ ಬರುತ್ತದೆ. ಬ್ಯಾಂಕ್ ಅಧಿಕಾರಿಗಳು ಇದರಲ್ಲಿ ಶಾಮೀಲಾಗಿರುವ ಕುರಿತು ಆತ್ಮಹತ್ಯೆ ನೋಟ್ನಲ್ಲಿ ಪ್ರಸ್ತಾಪಿಸಲಾಗಿದೆ. ಪರಿಶಿಷ್ಟ ಕಲ್ಯಾಣ ಸಚಿವರಾಗಿದ್ದ ನಾಗೇಂದ್ರ ಅವರು ಸ್ವಯಂಪ್ರೇರಿತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದರು.
ಬಿಜೆಪಿ ಆಡಳಿತ ಅವಧಿಯಲ್ಲಿ ಭೋವಿ ಅಭಿವೃದ್ಧಿ ನಿಗಮದ ಹಗರಣವಾದಾಗ ಅವರ ಪಕ್ಷದವರೇ ಆದ ಗೂಳಿಹಟ್ಟಿ ಶೇಖರ್ ಅವರು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದರು. ಆಗ ಯಾರು ರಾಜೀನಾಮೆ ನೀಡಿದ್ದರು? ಎಪಿಎಂಸಿ ಯಲ್ಲಿ ಆವರ್ತನಿಧಿ ʻಲೂಟಿ ಮಾಡಿದಾಗ, ದೇವರಾಜ ಅರಸ್ ಟ್ರಕ್ ಟರ್ಮಿನಲ್ ಹಗರಣದಲ್ಲಿ 47.10 ಕೋಟಿ ರೂ. ಅವ್ಯವಹಾರವಾದಾಗ, ಅಂದಿನ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಿದರೇ? ಈ ಪ್ರಕರಣಗಳಲ್ಲಿ ಇ.ಡಿ. ಯಾಕೆ ಸ್ವಯಂ ಪ್ರೇರಿತವಾಗಿ ಕೈಗೆತ್ತಿಕೊಂಡಿಲ್ಲ ಎಂದು ಪ್ರಶ್ನಿಸಿದರು.
ಎಲ್ಲಾ ಅಭಿವೃದ್ಧಿ ನಿಗಮಗಳ ಹಣವನ್ನು ಕಡ್ಡಾಯವಾಗಿ ರಾಜ್ಯ ಖಜಾನೆಯಲ್ಲಿ ಜಮಾ ಮಾಡಲು ಈಗಾಗಲೇ ಸೂಚನೆ ನೀಡಲಾಗಿದೆ. ಹಣಕಾಸು ನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ತರಲು ಹಲವು ಮಾರ್ಗಸೂಚಿಗಳನ್ನು ಹಣಕಾಸು ಇಲಾಖೆ ಜಾರಿಗೊಳಿಸಿದೆ ಎಂದು ಹೇಳಿದರು.
ಎಸ್.ಐ.ಟಿ.ಯು ಇದುವರೆಗೆ ಮುಟ್ಟು ಗೋಲು ಹಾಕಿಕೊಂಡಿರುವ ಮೊತ್ತ
ವಶಪಡಿಸಿಕೊಂಡ ಮೊತ್ತ (ರೂ.) ವಶಪಡಿಸಿಕೊಂಡ ವಿವರ
- 1 -14/2024 8,21,62,600 ಸತ್ಯನಾರಾಯಣ ವರ್ಮಾ
- 2 16/2024 3,62,47,200 ಪದ್ಮನಾಭ ಜೆ.ಜಿ.
- 3 17/2024 30,00,000 ಪದ್ಮನಾಭ ಜೆ.ಜಿ.
- 4 18/2024 1,49,65,200 ನಾಗೇಶ್ವರ ರಾವ್
- 5- 20/2024 30,00,000 ಚಂದ್ರಮೋಹನ್
- 6- 26/2024 12,50,000 ಜಿ.ಕೆ. ಜಗದೀಶ್
- 7- 27/2024 3,10,000 ಸತ್ಯನಾರಾಯಣ ವರ್ಮಾ
- 8 -28/2024 24,00,000 ಸತ್ಯನಾರಾಯಣ ವರ್ಮಾ
ಒಟ್ಟು ನಗದು 14,33,35,000 - 9 -207 ಗ್ರಾಂ ಚಿನ್ನ 13,50,000 ಚಂದ್ರಮೋಹನ್
- 10- 47.6 ಗ್ರಾಂ ಚಿನ್ನ 3,09,400 ಜಿ.ಕೆ. ಜಗದೀಶ್
- ಒಟ್ಟು ನಗದು 14,49,94,400
- 11- ವಿವಿಧ 217 ಬ್ಯಾಂಕ್ ಅಕೌಂಟ್ ಗಳನ್ನು ಗುರುತಿಸಿ ಅವುಗಳಲ್ಲಿದ್ದ 13,72,94,132 ರೂ.ಗಳನ್ನು ಫ್ರೀಜ್ ಮಾಡಲಾಗಿರುತ್ತದೆ.
- 12 – ಈ ಪ್ರಕರಣದಲ್ಲಿ ಭಾಗಿಯಾಗಿರುವ ಸತ್ಯನಾರಾಯಣ ವರ್ಮಾ ಮತ್ತು ಇತರೆ ಆರೋಪಿಗಳು ಅಕ್ರಮವಾಗಿ ಬೇರೆ ವ್ಯಕ್ತಿಗಳ ಖಾತೆಗಳಿಗೆ ವರ್ಗಾಯಿಸಿದ್ದ 1.50 ಕೋಟಿ ರೂ. ಹಣವನ್ನು ಜನರೇ ವಾಪಾಸ್ ಕಟ್ಟಿದ್ದಾರೆ. ಆ ಹಣ ಕೂಡ ಸರ್ಕಾರದಲ್ಲಿದೆ.
1,50,00,000 - 13 -ಎಸ್.ಐ.ಟಿ. ಯು ಸತ್ಯನಾರಾಯಣ ವರ್ಮಾ ಲ್ಯಾಂಬೋರ್ಗಿನಿ ಉರಸ್ ಎಂಬ ಕಾರ್ನ್ನು ಬಿಗ್ಬಾಯ್ಸ್ ಟಾಯ್ಸ್ ಲಿ. ಕಂಪನಿ ಮೂಲಕ ಖರೀದಿ ಮಾಡಿದ್ದ. ಈಗ ಆ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಸದರಿ ಕಂಪನಿಯು ಕಾರನ್ನು ವಾಪಸ್ ಪಡೆದು 3,31,19,166 ರೂ. ಹಣವನ್ನು ಸರ್ಕಾರಕ್ಕೆ ಮರಳಿಸುವುದಾಗಿ ಸಂಬಂಧಿತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿರುತ್ತಾರೆ.
3,31,19,166
ವಶಪಡಿಸಿಕೊಂಡ
ಮೊತ್ತ (ರೂ.) ವಶಪಡಿಸಿಕೊಂಡ ವಿವರ
14- ಇದೇ ಸತ್ಯನಾರಾಯಣ ವರ್ಮಾ 1.21 ಕೋಟಿಗೂ ಹೆಚ್ಚು ಬೆಲೆಬಾಳುವ ಬೆಂಜ್ ಕಾರನ್ನು ಖರೀದಿಸಿರುವುದು ತನಿಖೆಯಿಂದ ಗೊತ್ತಾಗಿದೆ. ಈ ಕಾರನ್ನು ಎಸ್.ಐ.ಟಿ.ಯು ತನ್ನ ವಶಕ್ಕೆ ಪಡೆದಿರುತ್ತದೆ. ಈ ಕಾರನ್ನೂ ಸಹ ಮರಳಿ ಕಂಪನಿಗೆ ನೀಡಿ ಅದರ ಮೌಲ್ಯವನ್ನು ವಾಪಸ್ ಪಡೆಯುವ ಪ್ರಕ್ರಿಯೆ ಚಾಲನೆಯಲ್ಲಿದೆ 1,21,00,000 .
15-ದಿನಾಂಕ:23.05.2024 ರಂದು ಅಕ್ರಮವಾಗಿ ವರ್ಗಾವಣೆಯಾಗಿದ್ದ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ[ ರತ್ನಾಕರ್ ಬ್ಯಾಂಕ್] ಎಸ್.ಟಿ. ನಿಗಮದ ಖಾತೆಗೆ 5.00 ಕೋಟಿ ಮರಳಿಸಿರುತ್ತಾರೆ.
5,00,00,000
16 -ಯೂನಿಯನ್ ಬ್ಯಾಂಕ್ನಿಂದ ಅಕ್ರಮವಾಗಿ ಹಣ ವರ್ಗಾವಣೆಯಾಗಿದ್ದ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 46.00 ಕೋಟಿಗೂ ಹೆಚ್ಚು ಹಣ ರತ್ನಾಕರ್ ಬ್ಯಾಂಕ್ ಲಿ. ನಲ್ಲಿದೆ. ಈ ಹಣವನ್ನು ನಮ್ಮ ಎಸ್.ಐ.ಟಿ. ತಂಡವು ಫ್ರೀಜ್ ಮಾಡಿರುತ್ತದೆ. ಅದನ್ನು ಹಿಂಪಡೆಯುವ ಪ್ರಕ್ರಿಯೆ ಪ್ರಾರಂಭಿಸಲಾಗುತ್ತಿದೆ. 46,00,00,000