ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Pradhan Mantri Fasal Bima Yojana: ಪಿಎಂ ಫಸಲ್ ಭೀಮಾ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ.. ಏನದು…?

On: July 11, 2023 2:43 PM
Follow Us:
PM PHASAL BHEEM
---Advertisement---

SUDDIKSHANA KANNADA NEWS/ DAVANAGERE/ DATE:11-07-2023

ದಾವಣಗೆರೆ: ಪಿಎಂ ಫಸಲ್ ಭೀಮಾ ಯೋಜನೆ (Pradhan Mantri Fasal Bima Yojana) ಫಲಾನುಭವಿಗಳಾ. ಹಾಗಿದ್ದರೆ ನಿಮಗೊಂದು ಸಿಹಿ ಸುದ್ದಿ. ಇದನ್ನು ಕೃಷಿ ಇಲಾಖೆಯೇ ಘೋಷಿಸಿದೆ.

2023-24 ನೇ ಸಾಲಿನಲ್ಲಿಯೂ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು 2023-24 ನೇ ಸಾಲಿನಲ್ಲಿಯೂ ಜಾರಿಯಲ್ಲಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ನಷ್ಟ ಹೇಗೆ ಪರಿಗಣಿಸಲಾಗುತ್ತೆ..?

ಬಿತ್ತನೆ ಅಥವಾ ನಾಟಿ ಕಾಲಕ್ಕೆ ಆಗುವ ನಷ್ಟ, ಬೆಳವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ ಕಟಾವಿನ ನಂತರದ ನಷ್ಟವನ್ನು ಸಹ ಪರಿಗಣಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಕೃಷಿ ವಿಮಾ ಕಂಪನಿಯನ್ನು ಬೆಳೆ ವಿಮೆ ಕಾರ್ಯಕ್ಕೆ ಆಯ್ಕೆ ಮಾಡಲಾಗಿದೆ.

ವಿಮಾ ಅರ್ಜಿಗಳು ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಲಭ್ಯವಿದ್ದು, ಈ ಯೋಜನೆಯಡಿ ಅರ್ಜಿಯನ್ನು ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಕಂತಿನ ವಿವರ:

2023 ನೇ ಸಾಲಿನ ಮುಂಗಾರು ಹಂಗಾಮಿನ ವಿಮಾ ಮೊತ್ತ ಮತ್ತು ರೈತರ ವಿಮಾ ಕಂತಿನ ವಿವರ ಪಡೆದುಕೊಳ್ಳಬಹುದು.

– ಭತ್ತ (ನೀರಾವರಿ) ಸಾಮಾನ್ಯ ವಿಮಾ ಮೊತ್ತ (ರೂ.ಗಳಲ್ಲಿ) ರೂ.93,250.

– ರೈತರ ವಿಮಾ ಕಂತು(ಶೇ.) 2, ರೈತರ ವಿಮಾಕಂತು ಮೊತ್ತ ರೂ.1865. ನೋಂದಾಯಿಸಿಕೊಳ್ಳಲು ಆಗಸ್ಟ್, 16 ಕೊನೆಯ ದಿನ.

– ಭತ್ತ(ಮಳೆಯಾಶ್ರಿತ) ವಿಮಾ ಮೊತ್ತ ರೂ.63,750, ರೈತರ ವಿಮಾ ಕಂತು(ಶೇ.) 2, ರೈತರ ವಿಮಾ ಕಂತು ಮೊತ್ತ ರೂ.1275, ನೋಂದಾಯಿಸಿಕೊಳ್ಳಲು ಆಗಸ್ಟ್, 31 ಕೊನೆ ದಿನ.

– ಮುಸುಕಿನ ಜೋಳ(ಮಳೆಯಾಶ್ರಿತ) ವಿಮಾ ಮೊತ್ತ ರೂ.56,500, ರೈತರ ವಿಮಾ ಕಂತು(ಶೇ.) 2, ರೈತರ ವಿಮಾ ಕಂತು ಮೊತ್ತ ರೂ.1,130. ನೋಂದಾಯಿಸಿಕೊಳ್ಳಲು ಜುಲೈ, 31 ಕೊನೆ ದಿನ.

ಈ ಯೋಜನೆಯಡಿಯಲ್ಲಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ.2 ಎಂದು ಪರಿಗಣಿಸಲಾಗಿದೆ. ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಳವಡಿಸಲಾಗುವುದು. ಈ ಯೋಜನೆಯು ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದ್ದು, ವಿಮಾ ಮೊತ್ತವು ಒಂದೇ ಆಗಿರಲಿದೆ.

ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ:

Amarnath Temple: ಕುದುರೆ ಮೇಲೂ ಹೋಗ್ಲಿಲ್ಲ, ನಡೆದುಕೊಂಡು ಹೋಗ್ಲಿಲ್ಲ.. ಬದುಕಿ ಬರಲು ಕಾರಣವಾದದ್ದು ಏನು…? ದಾವಣಗೆರೆ ಮಹಿಳೆಯರು ಬಿಚ್ಚಿಟ್ಟ ರೋಚಕ ಕಥೆ..!

ನೋಂದಾಯಿಸಿಕೊಳ್ಳೋದು ಹೇಗೆ…?

ಈ ಯೋಜನೆಯಲ್ಲಿ ರೈತರು ಅರ್ಜಿಯೊಂದಿಗೆ ಪಹಣಿ, ಬ್ಯಾಂಕ್ ಪಾಸ್ ಪುಸ್ತಕ ಮತ್ತು ಆಧಾರ್ ಸಂಖ್ಯೆ ನೀಡಿ ನೋಂದಾಯಿಸಿಕೊಳ್ಳಬೇಕು. ಯೋಜನೆಯ ಮಾಹಿತಿಯನ್ನು ಸಂರಕ್ಷಣೆ ತಂತ್ರಾಂಶದಲ್ಲಿ  http://www.samrakshane.karnataka.gov.in// ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಹೋಬಳಿಯ ರೈತ ಸಂಪರ್ಕ ಕೇಂದ್ರ ಹಾಗೂ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದಾಗಿದೆ. ಈ ಯೋಜನೆಯನ್ನು ಹೆಚ್ಚಿನ ರೈತರು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

 

 

 

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment