ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ರೇಷನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗುವುದು ವಸತಿ ಸೌಲಭ್ಯ

On: July 23, 2024 4:23 PM
Follow Us:
---Advertisement---

(Housing Facility) ವಸತಿ ರಹಿತ ತೃತೀಯ ಲಿಂಗಿಯವರು ರೇಷನ್ ಕಾರ್ಡ್ ಅನ್ನು ಹೊಂದಿದ್ದರೆ ದೇವರಾಜ ಅರಸು ವಸತಿ ಯೋಜನೆ ಅಡಿ ವಸತಿ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕಂಪ್ಲಿ ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.

ಹೌದು, ಕಂಪ್ಲಿ (ಬಳ್ಳಾರಿ) ಪುರಸಭೆ ವ್ಯಾಪ್ತಿಯಲ್ಲಿ ಬರುವ ತೃತೀಯ ಲಿಂಗಿ ಫಲಾನುಭವಿಗಳು ಈ ಯೋಜನೆಯ ಲಾಭ ಪಡೆಯಬಹುದು. ಇದಕ್ಕಾಗಿ ಅರ್ಜಿ ಸಲ್ಲಿಕೆ ಹೇಗೆ ಯಾವುದೆಲ್ಲಾ ದಾಖಲೆಗಳು ಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಆ.08 ಕೊನೆಯ ದಿನವಾಗಿರುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆ ಏನು?;

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಚುನಾವಣಾ ಗುರುತಿನ ಚೀಟಿ
  • ಪಡಿತರ ಚೀಟಿ
  • ನಿವೇಶನದ ಖಾತೆಯ ನಕಲು ಪ್ರತಿ
  • ಬ್ಯಾಂಕ್ ಪಾಸ್ ಪುಸ್ತಕ ನಕಲು ಪ್ರತಿ
  • ಪಾಸ್‌ಪೋರ್ಟ್ ಅಳತೆಯ ಫೋಟೋ
  • ಅರ್ಹತೆ ಏನಿರಬೇಕು?;
    • ತೃತೀಯ ಲಿಂಗಿ ಅರ್ಜಿದಾರರು ಮಾತ್ರ ಅರ್ಹ
    • ಕುಟುಂಬವು ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದ, ಬಡತನ ರೇಖೆಗಿಂತ ಕಡಿಮೆ ಇರಬೇಕು.
    • ಅರ್ಜಿದಾರರು ವಸತಿ ರಹಿತ, ಶೂನ್ಯ ಕೋಣೆ, ಒಂದು ಕೋಣೆ, ಎರಡು ಕೋಣೆಯೊಂದಿಗೆ ಕಚ್ಚಾ ಗೋಡೆ ಹಾಗೂ ಕಚ್ಚಾ ಛಾವಣಿ ಹೊಂದಿದವರು ಸಹ ಅರ್ಜಿ ಸಲ್ಲಿಸಬಹುದು.
    • ಅರ್ಜಿದಾರರು ಅಥವಾ ಕುಟುಂಬದ ಸದಸ್ಯರ ಹೆಸರಿನಲ್ಲಿ ಯಾವುದೇ ಭಾಗದಲ್ಲಿ ಸ್ವಂತ ಮನೆ ಹೊಂದಿರಬಾರದು. ಬದಲಾಗಿ ಶಿಥಿಲಗೊಂಡ ಮನೆ, ಗುಡಿಸಲು, ಖಾಲಿ ನಿವೇಶನದಲ್ಲಿ ವಾಸಿಸುತ್ತಿರುವವರು ಅರ್ಹರಾಗಿರುತ್ತಾರೆ.
    • ಅರ್ಜಿದಾರರು ಸ್ವಂತ ನಿವೇಶನ ಹೊಂದಿದಲ್ಲಿ ನಿವೇಶನಕ್ಕೆ ಸಂಬಂಧಿಸಿದಂತೆ ಖಾತೆ ಹೊಂದಿರಬೇಕು. ಬೇರೆ ಯಾವುದೇ ಯೋಜನೆಗಳಡಿ ಹಾಗೂ ಇಲಾಖೆ ವತಿಯಿಂದ ಸೌಲಭ್ಯ ಪಡೆದಿರಬಾರದು.
    • ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ ಕಂಪ್ಲಿ ಪುರಸಭೆ ಕಾರ್ಯಾಲಯದ ಆಶ್ರಯ ಶಾಖೆಯನ್ನು ಸಂಪರ್ಕಿಸಬಹುದು.

 

Join WhatsApp

Join Now

Join Telegram

Join Now

Leave a Comment