ಕಠ್ಮಂಡು: 19 ಪ್ರಯಾಣಿಕರನ್ನು ಹೊತ್ತ ಖಾಸಗಿ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನವು ಟೇಕ್ ಆಫ್ ಆಗುವ ವೇಳೆ ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಬೆಳಿಗ್ಗೆ ಅಪಘಾತಕ್ಕೀಡಾಗಿದೆ.
ಬೆಳಿಗ್ಗೆ 11 ಗಂಟೆ ಸುಮಾರಿಗೆ ಅಪಘಾತಕ್ಕೀಡಾದ ಪೊಖಾರಾಗೆ ತೆರಳುತ್ತಿದ್ದ ಸೌರ್ಯ ಏರ್ಲೈನ್ಸ್ ವಿಮಾನದಲ್ಲಿ ಏರ್ಕ್ರೂ ಸೇರಿದಂತೆ ಕನಿಷ್ಠ 19 ಜನರು ಸಜೀವ ದಹನವಾಗಿದ್ದಾರೆ ವಿಮಾನ ನಿಲ್ದಾಣದಲ್ಲಿ ನಿಯೋಜಿಸಲಾದ ಭದ್ರತಾ ಅಧಿಕಾರಿಯೊಬ್ಬರು ಹೆಚ್ಚಿನ ವಿವರಗಳನ್ನು ನೀಡದೆ ಪಿಟಿಐಗೆ ತಿಳಿಸಿದ್ದಾರೆ.
ವಿಮಾನದಿಂದ ಸಂಭವಿಸಿದ ಬೆಂಕಿಯನ್ನು ನಂದಿಸಲಾಗಿದೆ ಎಂದು ಅವರು ಹೇಳಿದರು. ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪ್ರಯಾಣಿಕರ ಸ್ಥಿತಿಯ ಬಗ್ಗೆ ವಿವರಗಳು ತಿಳಿದಿಲ್ಲ.