SUDDIKSHANA KANNADA NEWS/ DAVANAGERE/ DATE:26-07-2024
ಶಿವಮೊಗ್ಗ: ತೋಟಗಾರಿಕೆ ಇಲಾಖೆಯಿಂದ ಮರು ವಿನ್ಯಾಸಗೊಳಿಸಲಾದ ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯಡಿ ವಿಮೆ ನೋಂದಣಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರು ತೋಟಗಾರಿಕೆ, ಕೃಷಿ ಇಲಾಖೆ ಅಧಿಕಾರಿಗಳು ಮತ್ತು ವಿಮಾ ಕಂಪನಿಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು.
ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯಡಿ ಬರುವ ಜಿಲ್ಲೆಯ ಬೆಳೆಗಳಾದ ಅಡಿಕೆ, ಮಾವು, ಕಾಳು ಮೆಣಸು ಮತ್ತು ಶುಂಠಿ ಬೆಳೆಯನ್ನು ಬೆಳೆದಂತಹ, ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು
ಸಂರಕ್ಷಣೆ ತಂತ್ರಾAಶದಲ್ಲಿ ನೊಂದಾಯಿಸಲು ಜುಲೈ 31 ರವರೆಗೆ ಅವಕಾಶ ಕಲ್ಪಿಸಲಾಗಿರುತ್ತದೆ.
ವಿಮೆ ನೊಂದಣಿ ಮಾಡುವ ಸಂದರ್ಭದಲ್ಲಿ ರೈತರು ಬೆಳೆದಿರುವಂತಹ ನೊಂದಾಯಿತ ಬೆಳೆಗಳು ಸಂರಕ್ಷಣೆ ತಂತ್ರಾAಶದಲ್ಲಿ ಕಂಡು ಬಾರದ ಹಿನ್ನಲೆಯಲ್ಲಿ ಹಲವಾರು ರೈತರು ಹವಾಮಾನಾಧಾರಿತ ಬೆಳೆ ಬೆಳೆ ವಿಮೆ
ಯೋಜನೆಯಡಿ ನೊಂದಾಯಿಸಲು ಸಾಧ್ಯವಾಗುತ್ತಿಲ್ಲ.
ಕಳೆದ ಎರಡು ವರ್ಷಗಳಲ್ಲಿ ಬೆಳೆ ಸಮೀಕ್ಷೆ ಪ್ರಕಾರ ನೊಂದಾಯಿತ ಬೆಳೆ ಬಂದರೆ ಅಥವಾ ಕನಿಷ್ಟ ಒಂದು ವರ್ಷದಲ್ಲಿಯಾದರು ಬೆಳೆ ಸಮೀಕ್ಷೆಯಲ್ಲಿ ನೊಂದಾಯಿತ ಬೆಳೆ ಕಂಡು ಬಂದರೆ ಅಂತಹ ಪ್ರಕರಣಗಳನ್ನು
ಪರಿಗಣಿಸಿ ಸಂರಕ್ಷಣೆ ತಂತ್ರಾAಶದಲ್ಲಿ ನೋಂದಣಿ ಮಾಡಲು ಜಿಲ್ಲಾಧಿಕಾರಿಗಳು ಆದೇಶಿಸುತ್ತಾ, ಜಿಲ್ಲೆಯ ರೈತರು ಸದರಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.