ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸಿಎಂ ಸಿದ್ದರಾಮಯ್ಯರ ಬಣ್ಣ ಬಯಲು, ವಾಲ್ಮೀಕಿ, ಮುಡಾ ಹಗರಣ ಸಿಬಿಐಗೆ ವಹಿಸಿ: ಬಿಜೆಪಿ- ಜೆಡಿಎಸ್ ಸಂಸದರ ಡಿಮ್ಯಾಂಡ್..!

On: July 26, 2024 4:02 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:26-07-2024

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣ್ಣ ಬಯಲಾಗಿದ್ದು, ವಾಲ್ಮೀಕಿ ಹಗರಣ ಹಾಗೂ ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ನೀಡಿ, ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ – ಜೆಡಿಎಸ್ ಸಂಸದರು ಸಂಸತ್ ಭವನದ ಎದುರು ಪ್ರತಿಭಟನೆ ನಡೆಸಿದರು.

ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿ ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ನಡೆದಿರುವ ವಾಲ್ಮೀಕಿ ನಿಗಮದ ಹಗರಣ ಹಾಗೂ ಮುಡಾ ಹಗರಣವನ್ನು ಸಿಬಿಐಗೆ ವಹಿಸುವಂತೆ ಇಂದು ಬಿಜೆಪಿ ಹಾಗೂ ಜೆಡಿಎಸ್ ಸಂಸದರು ನವದೆಹಲಿಯಲ್ಲಿ ಸಂಸತ್ ಭವನದ ಎದುರು ಪ್ರತಿಭಟನೆ ನಡೆಸಿದ್ದೇವೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಜವಾದ ಬಣ್ಣ ಬಯಲಾಗಿದೆ. ಅವರು ತಮ್ಮಷ್ಟಕ್ಕೆ ತಾವೇ ಪ್ರಾಮಾಣಿಕರು ಎಂದು ಸರ್ಟಿಫಿಕೇಟ್ ತೆಗೆದುಕೊಳ್ಳುತ್ತಾರೆ. ಇದು ಮೊದಲನೇಯದ್ದೇನಲ್ಲ ಬಿಡಿಎನಲ್ಲಿ‌ ರಿಡೂ ಮಾಡಿಸಲು ಮುಂದಾಗಿದ್ದರು. ಆಗ ಆಯೋಗ ರಚನೆ ಮಾಡಿ ಪ್ರಕರಣ ಮುಚ್ಚಿ ಹಾಕಿದರು. ಈ ಮಧ್ಯೆ ಮಂಡ್ಯದಲ್ಲಿ ಮುಡಾದ ಹಗರಣ ಆಯಿತು ಆಗ ಸಿದ್ದರಾಮಯ್ಯ ಅವರು ಸಿಬಿಐಗೆ ಕೊಟ್ಟರು. ಈಗ ಮೈಸೂರಿನಲ್ಲಿ ಮುಡಾ ಹಗರಣ ಆಗಿದೆ. ಅದನ್ನು ಯಾಕೆ ಸಿಬಿಐಗೆ ಕೊಡಬಾರದು ಎಂದು ಪ್ರಶ್ನಿಸಿದರು.

ಮಂಡ್ಯ ಮುಡಾದಲ್ಲಿ ಹಗರಣ ಆದರೆ ಸಿಬಿಐಗೆ ಕೊಡುತ್ತಾರೆ. ಮೈಸೂರು ಮುಡಾ ಹಗರಣ ಆದರೆ, ನ್ಯಾಯಾಂಗ ತನಿಖೆಗೆ ಕೊಡುತ್ತಾರೆ. ಇದನ್ನೂ ಸಿಬಿಐ ತನಿಖೆಗೆ ನೀಡಿ, ತನಿಖೆ ಮುಗಿಯುವವರೆಗೂ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಆಗ್ರಹಿಸಿದರು.

ಮಂಡ್ಯದಲ್ಲಿ ನಡೆದ ಅಕ್ರಮದ ಆರೋಪ ಪ್ರತಿಪಕ್ಷದವರ ಮೇಲೆ ಇತ್ತು ಎಂದು ಅದನ್ನು ಸಿಬಿಐ ತನಿಖೆಗೆ ನೀಡಿದ್ದೀರಿ, ಮೈಸೂರಿನ ಮುಡಾದಲ್ಲಿ ನಡೆದ ಹಗರಣದಲ್ಲಿ ನಿಮ್ಮ ಹೆಸರಿದೆ ಎಂದು ತನಿಖೆಗೆ ಆಯೋಗ ರಚನೆ ಮಾಡುತ್ತೀರಾ ? ರಾಜ್ಯದಲ್ಲಿ ಯಾವ ನ್ಯಾಯಾಂಗ‌ ಆಯೋಗ ಯಾವ ಹಗರಣವನ್ನು ಬಯಲಿಗೆಳೆದಿದೆ, ಮುಡಾ ಹಗರಣ ಮುಚ್ಚಿ ಹಾಕುವ ಸಲುವಾಗಿ ನ್ಯಾಯಾಂಗ ಆಯೋಗ ರಚನೆ ಮಾಡಿದ್ದಾರೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರ ವಾಲ್ಮೀಕಿ ನಿಗಮದಲ್ಲಿ ಅಷ್ಟೇ ಅಲ್ಲ ಎಸ್ಸಿಪಿ ಹಾಗೂ ಟಿಎಸ್ ಪಿಯಲ್ಲಿಯೂ ದಲಿತರ ಹಣವನ್ನು ಲೂಟಿ ಮಾಡಿದ್ದಾರೆ. ಎಸ್ಸಿಪಿ ಟಿಎಸ್ ಪಿಯ ಸುಮಾರು 25 ಸಾವಿರ ಕೋಟಿ ರೂ. ದಲಿತರ ಹಣವನ್ನು ಸಾಮಾನ್ಯ ವರ್ಗದ ಯೋಜನೆಗಳಿಗೆ ವರ್ಗಾವಣೆ ಮಾಡಿದ್ದಾರೆ. ಇದು ದಲಿತ ವಿರೋಧಿ ಸರ್ಕಾರವಾಗಿದೆ. ಮುಡಾ ಹಗರಣದಲ್ಲಿ ಸರ್ಕಾರ ಸಿಲುಕಿಕೊಂಡಿರುವುದರಿಂದ ಮುಂದಿನ ಮೂರು ವರ್ಷ ಕೇವಲ ತಮ್ಮ ರಕ್ಷಣೆಗಾಗಿ ಕೆಲಸ ಮಾಡುತ್ತಾರೆ ಹೊರತು ರಾಜ್ಯದ ಅಭಿವೃದ್ಧಿಗೆ ಯಾವುದೇ ಕೆಲಸ ಮಾಡುವುದಿಲ್ಲ ಎಂದು ಹೇಳಿದರು.

ರಾಜ್ಯ ಸರ್ಕಾರ ತಕ್ಷಣವೇ ಎರಡೂ ಹಗರಣಗಳನ್ನು ಸಿಬಿಐಗೆ ನೀಡಬೇಕು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಇಂದು ಸಂಸತ್ ಭವನದ ಹೊರಗೆ ಪ್ರತಿಭಟನೆ ಮಾಡಿದ್ದೇವೆ. ಮುಂದಿನ ವಾರ ಸಂಸತ್ ಒಳಗೂ ಈ ಹಗರಣಗಳ ಕುರಿತು ವಿಸ್ತೃತವಾದ ಚರ್ಚೆಗೆ
ಅವಕಾಶ ನೀಡುವಂತೆ ಸಭಾಧ್ಯಕ್ಷರಿಗೆ ಮನವಿ ಮಾಡುವುದಾಗಿ ತಿಳಿಸಿದರು.

ಪ್ರತಿಭಟನೆಯಲ್ಲಿ ಸಂಸದರಾದ ಗೋವಿಂದ ಕಾರಜೋಳ, ವಿಶ್ವೆಶ್ವರ ಹೆಗಡೆ ಕಾಗೇರಿ, ಡಾ‌. ಮಂಜುನಾಥ, ಪಿ.ಸಿ ಗದ್ದಿಗೌಡರ, ಯದುವೀರ ಒಡೆಯರ್, ಬಿ.ವೈ ರಾಘವೇಂದ್ರ, ಜಗ್ಗೇಶ್, ನಾರಾಯಣಸಾ ಭಾಂಡಗೆ ಸೇರಿದಂತೆ ರಾಜ್ಯದ ಬಿಜೆಪಿ ಸಂಸದರು ಪಾಲ್ಗೊಂಡಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

india

ಕ್ಷಣಕ್ಷಣಕ್ಕೂ ರೋಚಕದಾಟ.. ವಿಜಯಮಾಲೆ ಹಾವು ಏಣಿ ಆಟ: ಇಂಗ್ಲೆಂಡ್ ವಿರುದ್ದ ಭಾರತಕ್ಕೆ 6 ರನ್ ರೋಚಕ ಜಯ!

D. K. Shivakumar

ಸೋನಿಯಾ ಗಾಂಧಿಯರದ್ದು ಸಾಟಿಯಿಲ್ಲದ ರಾಜಕೀಯ ತ್ಯಾಗ: ಡಿ. ಕೆ. ಶಿವಕುಮಾರ್ ಸ್ಫೋಟಕ ಮಾತು… ಮುಖ್ಯಮಂತ್ರಿ ಪಟ್ಟದ ಮೇಲಿನ ಕಣ್ಣು!

H. C. Mahadevappa

ಪುಣ್ಯತಿಥಿಯ ಸಂಸ್ಮರಣಾ ಕಾರ್ಯಕ್ರಮದಲ್ಲೇ ಅಪಮಾನ: ಇತಿಹಾಸ ತಿರುಚುವ ಕೆಲಸ ನಿಲ್ಲಿಸಿ ಹೆಚ್. ಸಿ. ಮಹಾದೇವಪ್ಪ!

Pahalgam

ವೋಟರ್ ಐಡಿ, ಕ್ಯಾಂಡಿಲ್ಯಾಂಡ್ ಚಾಕೊಲೇಟ್‌ಗಳು, ಜಿಪಿಎಸ್: ಪಹಲ್ಗಾಮ್ ದಾಳಿ ಉಗ್ರರು ಪಾಕಿಸ್ತಾನದವರೆಂದು ಸಾಬೀತು!

RAHUL GANDHI

ಭಾರತ – ಚೀನಾ ಗಡಿ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂ ತಡೆ!

ಕನ್ನಂಬಾಡಿ

ಕನ್ನಂಬಾಡಿ ಕಟ್ಟೆಗೆ ಅಡಿಪಾಯ ಹಾಕಿದ್ದು ಟಿಪ್ಪು: “ಹೆಚ್. ಸಿ. ಮಹಾದೇವಪ್ಪನವರೇ ರಾಜಮನೆತನದ ಕೊಡುಗೆ ಗೌರವಿಸಿ, ಇಲ್ಲದಿದ್ದರೆ ತೆಪ್ಪಗಿರಿ!”

Leave a Comment