SUDDIKSHANA KANNADA NEWS/ DAVANAGERE/ DATE:29-07-2024
ಬೆಂಗಳೂರು: ಮಡಿಕೇರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜುಲೈ, 30 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ”ಉದ್ಯೋಗ ಮೇಳ’ ನಡೆಯಲಿದೆ.
ಈ ಉದ್ಯೋಗ ಮೇಳದಲ್ಲಿ, ರಾಣಿ ಮದ್ರಾಸ್ ಮೈಸೂರು, ಹಿಮಂತ್ಸಾ ಸಿಂಗ್ ಕಾ ಲಿನೆನ್ ಹಾಸನ, ತಾಜ್ ರೆಸಾರ್ಟ್, ಮಡಿಕೇರಿ, ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಪೆಂಟೆಟೆಕ್, ಮಡಿಕೇರಿ, ಎಸ್ಎಲ್ಎನ್ ಕಾಫಿ ವರ್ಕ್ಸ್ ಲಿ. ಕೂಡಿಗೆ, ಮುತ್ತೂಟ್ ಪೈನಾನ್ಸ್, ಮೈಸೂರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗ ಮೇಳದಲ್ಲಿ ಎಸ್ಎಸ್ಎಲ್ಸಿಗಿಂತ ಕಡಿಮೆ,
ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿ ಉದ್ಯೋಗದ ನೆರವು ಪಡೆಯಬಹುದು. ಅಭ್ಯರ್ಥಿಗಳು ಸ್ವಯಂ-ವಿವರ
(ಬಯೋಡೇಟಾ)ಗಳ ಪ್ರತಿಗಳೊಂದಿಗೆ ಉದ್ಯೋಗ ಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ರೇಖಾ ಗಣಪತಿ ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 8296020826 ಮೂಲಕ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.