(HE Scholarship) ಎಂಜಿನಿಯರಿಂಗ್ ವಿದ್ಯಾರ್ಥಿನಿಯರಿಗೆ ಬೈ ಶೇಫ್ಲರ್ ಇಂಡಿಯಾವು ಹೋಪ್ ಎಂಜಿನಿಯರಿಂಗ್ ಸ್ಕಾಲರ್ಶಿಪ್ ನೀಡುತ್ತಿದ್ದು, ಅರ್ಹ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು?, ಅರ್ಜಿ ಸಲ್ಲಿಕೆ ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಶೇಫ್ಲರ್ ಇಂಡಿಯಾವು ಮೊದಲ-ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯರಿಗೆ (ದೈಹಿಕ ವಿಶೇಷಚೇತನ ವಿದ್ಯಾರ್ಥಿನಿಯರಿಗೆ ಆದ್ಯತೆ ನೀಡಲಾಗುತ್ತದೆ) ತಮ್ಮ ಎಂಜಿನಿಯರಿಂಗ್ ಅಧ್ಯಯನವನ್ನು ಮುಂದುವರಿಸಲು ಆರ್ಥಿಕವಾಗಿ ಬೆಂಬಲ ನೀಡುವ ನಿಟ್ಟಿನಲ್ಲಿ ಈ ಸ್ಕಾಲರ್ ಶಿಪ್ ನೀಡುತ್ತಿದ್ದು, ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು ಎಂಬುದು ಈ ಕೆಳಗೆ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು?;

- ಈ ವಿದ್ಯಾರ್ಥಿವೇತನವು ವಿದ್ಯಾರ್ಥಿನಿಯರಿಗೆ ಲಭ್ಯವಿರುತ್ತದೆ.
- ಈ ಸ್ಕಾಲರ್ ಶಿಪ್ ದೈಹಿಕ ವಿಶೇಷಚೇತನ ವಿದ್ಯಾರ್ಥಿನಿಯರಿಗೆ ಆದ್ಯತೆ ನೀಡಲಾಗುತ್ತದೆ.
- ಅರ್ಜಿದಾರರು ಶೈಕ್ಷಣಿಕ ವರ್ಷ 2023-24ರಲ್ಲಿ ತಮ್ಮ 12ನೇ ತರಗತಿಯಲ್ಲಿ (ವಿಜ್ಞಾನ) 60% ಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರಬೇಕು.
- ಭಾರತದ ಯಾವುದೇ ಮಾನ್ಯ ಕಾಲೇಜಿನಲ್ಲಿ ಎಂಜಿನಿಯರಿಂಗ್ ಕಾರ್ಯಕ್ರಮದ ಮೊದಲ ವರ್ಷಕ್ಕೆ ದಾಖಲಾಗಿರಬೇಕು.
- ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ರೂ.5 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಎಷ್ಟು ಸ್ಕಾಲರ್ ಶಿಪ್ ಲಭ್ಯ:
50,000 - ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿನಿಯರು www.b4s.in/nwmd/SIHE15 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. - ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
15-08-2024