SUDDIKSHANA KANNADA NEWS/ DAVANAGERE/ DATE:08-08-2024
ದಾವಣಗೆರೆ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ, ಕ್ರೀಡೆ ಮತ್ತು ಹಿರಿಯ ನಾಗರಿಕರ ಸೇವಾ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 6 ವೈಯಕ್ತಿಕ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 1 ಸಂಸ್ಥೆಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹರು ಹಿರಿಯ ನಾಗರಿಕರ ಸಬಲೀಕರಣಾಧಿಕಾರಿಗಳ ಕಚೇರಿ, ಕುವೆಂಪು ನಗರ, 14ನೇ ಮುಖ್ಯ ರಸ್ತೆ, ಶಂಕರಲೀಲಾ ಗ್ಯಾಸ್ ಏಜೆನ್ಸಿ ಹತ್ತಿರ, ಎಂ.ಸಿ.ಸಿ ಬಿ.ಬ್ಲಾಕ್ ಇಲ್ಲಿ ಅರ್ಜಿ ಪಡೆದು ಆಗಸ್ಟ್ 31 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವಿಕಲಚೇತನರ ಸಹಾಯವಾಣಿ 08192-263939, 7483968224, ನಿವೃತ್ತ ನೌಕರರ ಸಂಘ ಕಾರ್ಯದರ್ಶಿ ಗುರುಮೂರ್ತಿ ದೂ.ಸಂ. 9844143827, ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರ 9148672498 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ.ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.