ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Davanagere: ಸುಸಜ್ಜಿತ ಫುಡ್ ಕೋರ್ಟ್, ಬೀದಿ ಬದಿ ವ್ಯಾಪಾರಿಗಳ ವ್ಯಾಪಾರಕ್ಕೆ ಕ್ರಮ: ಪರಿಶೀಲಿಸಿದ ಮೇಯರ್, ಕಮೀಷನರ್, ಗಡಿಗುಡಾಳ್ ನೇತೃತ್ವದ ತಂಡ

On: July 22, 2023 12:19 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:22-07-2023

ದಾವಣಗೆರೆ (Davanagere): ನಗರದಲ್ಲಿ ವ್ಯವಸ್ಥಿತವಾದ ಫುಡ್ ಕೋರ್ಟ್ ಮತ್ತು ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಸೂಕ್ತ ಸ್ಥಳ ನಿಗದಿಗೆ ಮಹಾನಗರ ಪಾಲಿಕೆ ಮೇಯರ್ ವಿನಾಯಕ್ ಪೈಲ್ವಾನ್ ನೇತೃತ್ವದ ತಂಡ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ವಿನಾಯಕ್ ಪೈಲ್ವಾನ್ ಜೊತೆಗೆ ಆಯುಕ್ತರಾದ ರೇಣುಕಾ, ಮಹಾನಗರ ಪಾಲಿಕೆಯ ಆಡಳಿತ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್, ಕಾರ್ಯಪಾಲಕ ಅಭಿಯಂತರರು ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು ವೀಕ್ಷಣೆ ಮಾಡಿದರು. ಗುಂಡಿ ಸರ್ಕಲ್, ಜಯದೇವ ವೃತ್ತ, ಬಾಪೂಜಿ ಆಸ್ಪತ್ರೆ ರಸ್ತೆ, ಹದಡಿ ರಸ್ತೆ, ಹೊಂಡಾ ಸರ್ಕಲ್ ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಸೂಕ್ತ ಸ್ಥಳದ ತಲಾಶ್ ನಡೆಸಲಾಯಿತು.

ದಾವಣಗೆರೆ ನಗರದಲ್ಲಿ ಜನರಿಗೆ ಸುಲಭ ಹಾಗೂ ವ್ಯವಸ್ಥಿತವಾಗಿ ಆಹಾರ ಸಿಗುವ ಸ್ಥಳ ಇಲ್ಲ. ಹಾಗಾಗಿ, ಅತ್ಯಾಧುನಿಕ ವ್ಯವಸ್ಥೆಯುಳ್ಳ, ಜನಸಾಮಾನ್ಯರು ಸೇರಿದಂತೆ ಎಲ್ಲಾ ವರ್ಗದವರಿಗೆ ಉತ್ತಮವಾದ ಫುಡ್ ಕೋರ್ಟ್ ಹಾಗೂ ಬೀದಿ ಬದಿ ವ್ಯಾಪಾರಿಗಳಿಗೆ ಸೂಕ್ತ ಸ್ಥಳ ಗುರುತಿಸುವ ಕಾರ್ಯ ಕೈಗೊಳ್ಳಲಾಗುತ್ತಿದೆ. ಬೀದಿ ಬದಿ ವ್ಯಾಪಾರಿಗಳು ರಸ್ತೆಯ ಬೀದಿಗಳಲ್ಲಿ ವ್ಯಾಪಾರ ಮಾಡುತ್ತಾರೆ. ಪಿ. ಬಿ. ರಸ್ತೆ ಸೇರಿದಂತೆ ಕೆಲವು ಬಡಾವಣೆಗಳಲ್ಲಿ ವ್ಯಾಪಾರ ಮಾಡುತ್ತಾರೆ ಎಂದು ಪಾಲಿಕೆ ಮೇಯರ್ ವಿನಾಯಕ್ ಪೈಲ್ವಾನ್ ತಿಳಿಸಿದರು.

ತ್ಯಾಜ್ಯ ನಿರ್ವಹಣೆ, ಮಳೆಗಾಲದ ವೇಳೆ ಸೂಕ್ತವಾದ ಜಾಗ ಇರದ ಕಾರಣ ವ್ಯಾಪಾರಿಗಳು ಮತ್ತು ಬೀದಿ ಬದಿ ವ್ಯಾಪಾರಿಗಳು, ಗ್ರಾಹಕರು ಸಂಕಷ್ಟ ಅನುಭವಿಸುವಂತಾಗಿದೆ. ಈ ಸಮಸ್ಯೆ ಪರಿಹರಿಸಲು ಫುಡ್ ಕೋರ್ಟ್ ಹಾಗೂ ಬೀದಿ ವ್ಯಾಪಾರಿಗಳಿಗೆ ಅನುಕೂಲ ಮಾಡಿಕೊಡಲು ಈ ಪರಿಶೀಲನೆ ನಡೆಸಲಾಗಿದೆ. ಸುಸಜ್ಜಿತ ಫುಡ್ ಕೋರ್ಟ್ ಮತ್ತು ಬೀದಿ ಬದಿ ವ್ಯಾಪಾರಿಗಳಿಗೆ ಸೂಕ್ತ ಸ್ಥಳಾವಕಾಶ ಮಾಡಿಕೊಟ್ಟರೆ ಎಲ್ಲರಿಗೂ ಅನುಕೂಲವಾಗಲಿದೆ ಎಂದು ತಿಳಿಸಿದರು.

ಆಯುಕ್ತರಾದ ರೇಣುಕಾ ಮಾತನಾಡಿ, ಈಗಾಗಲೇ ಜನಸಂದಣಿ ಮತ್ತು ವ್ಯಾಪಾರ ಮಾಡುತ್ತಿರುವ ಸ್ಥಳ ಗುರುತಿಸಲಾಗಿದೆ. ಮಾತ್ರವಲ್ಲ, ಜನರಿಗೆ ಅನುಕೂಲವಾಗುವ ಸ್ಥಳದಲ್ಲಿ ಫುಡ್ ಕೋರ್ಟ್ ಮಾಡಿದರೆ ವ್ಯಾಪಾರವೂ ಚೆನ್ನಾಗಿ ಆಗುತ್ತದೆ.
ದಾವಣಗೆರೆ ಜನರಿಗೂ ಅನುಕೂಲವಾಗುತ್ತದೆ. ಜೊತೆಗೆ ಬೀದಿ ಬದಿ ವ್ಯಾಪಾರಿಗಳು ಕೆಲವು ವೇಳೆ ತೊಂದರೆಗೆ ಸಿಲುಕುತ್ತಾರೆ. ಅವರಿಗೂ ಸೂಕ್ತ ಜಾಗದಲ್ಲಿ ಅನುವು ಮಾಡಿಕೊಟ್ಟರೆ ಒಳ್ಳೆಯದಾಗುತ್ತದೆ ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ: 

Davanagere: ದಾವಣಗೆರೆಯಲ್ಲಿ ಮೂರು ಸೀರಿಯಲ್ ನ ನಟರ ಸಮಾಗಮ: ಜಾತ್ರಾ ಕಲ್ಯಾಣೋತ್ಸವಕ್ಕೆ ಆಗಮಿಸಿದ ಕಲಾವಿದರು ಖುಷ್

ಮಹಾನಗರ ಪಾಲಿಕೆಯ ಎದುರುಗಡೆ ಇರುವ ಅಂಡರ್ ಬ್ರಿಡ್ಜ್ ನಲ್ಲಿ ಮಳೆ ಜೋರಾಗಿ ಬಂದರೆ ನೀರು ನಿಲ್ಲುವುದು ಮುಂದುವರಿದಿದೆ. ಹಾಗಾಗಿ, ಸ್ಥಳಕ್ಕೆ ಭೇಟಿ ನೀಡಿದ ಮೇಯರ್, ಆಯುಕ್ತರು, ಆಡಳಿತ ಪಕ್ಷದ ನಾಯಕರು ಹಾಗೂ ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟರು. ಸ್ಮಾರ್ಟ್ ಸಿಟಿ ಅಧಿಕಾರಿಗಳು ಈ ಅಂಡರ್ ಪಾಸ್ ನಲ್ಲಿ ಹೂಳು ತುಂಬಿದ್ದು ಅದರಿಂದ ನೀರು ಸರಾಗವಾಗಿ ಹೋಗುತ್ತಿಲ್ಲ. ಈ ಕಾರಣದಿಂದ ನೀರು ನಿಲ್ಲುತ್ತಿದೆ. ಮಾತ್ರವಲ್ಲ, ನೀರು ಹೊರ ಹಾಕಲು
ಮೋಟಾರ್ ಚಾಲನೆ ಮಾಡುವಂತೆ ಸೂಚನೆ ನೀಡಲಾಯಿತು.

ಆಡಳಿತ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್ ಮಾತನಾಡಿ, ದಾವಣಗೆರೆಯಲ್ಲಿಯೂ ಬೇರೆ ಜಿಲ್ಲೆಗಳಂತೆ ಸೂಕ್ತ ಫುಡ್ ಕೋರ್ಟ್ ಹಾಗೂ ಬೀದಿ ಬದಿ ವ್ಯಾಪಾರಿಗಳ ಸಮಸ್ಯೆ ಪರಿಹರಿಸುವ ಸಲುವಾಗಿ ಯೋಜನೆ ಹಾಕಿಕೊಳ್ಳಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ ನಿರ್ದೇಶನದಂತೆ ಜಾಗಗಳನ್ನು ಗುರುತಿಸುವ ಕೆಲಸ ಮಾಡಿದ್ದೇವೆ. ಉತ್ತಮ ವಾತಾವರಣದಲ್ಲಿ, ಗ್ರಾಹಕರಿಗೆ ಅನುಕೂಲವಾಗುವಂಥ ನಿಟ್ಟಿನಲ್ಲಿ ಈ ಯೋಜನೆ ರೂಪಿಸಲಾಗುತ್ತಿದೆ
ಎಂದು ತಿಳಿಸಿದರು.

ಈ ವೇಳೆ ಪಾಲಿಕೆಯ ಎಲೆಕ್ಟ್ರಿಸಿಟಿ ವಿಭಾಗದ ಕಾರ್ಯಪಾಲಕ ಅಭಿಯಂತರ ಉದಯ್ ಕುಮಾರ್, ಸಿವಿಲ್ ವಿಭಾಗದ ಕಾರ್ಯಪಾಲಕ ಅಭಿಯಂತರ ಮನೋಹರ್, ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಜರಿದ್ದರು.

 

Davanagere News, Davanagere Visit, Davanagere News Updates, Davanagere News Updates Mahanagara Palike, Davanagere Mahanagara Palike Officers, Davanagere Palike Mayor Visit,

 

 

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment