SUDDIKSHANA KANNADA NEWS/ DAVANAGERE/ DATE:11-08-2024
ದಾವಣಗೆರೆ: ಭದ್ರಾ ಡ್ಯಾಂ ಕೂಡ ಸುರಕ್ಷತೆ ಹೊಂದಿಲ್ಲ. ಸುಮಾರು 62 ವರ್ಷಗಳ ಹಿಂದೆ ಗಾರೆ, ಕಲ್ಲು ಸುಣ್ಣ ಬಳಸಿ ಡ್ಯಾಂ ನಿರ್ಮಿಸಲಾಗಿದೆ. ಸಹಜವಾಗಿ ತಳದಲ್ಲಿ ಸೋರುತ್ತಿದೆ. ಇದಕ್ಕಾಗಿ ಸ್ಲೂಯಿಸ್ ಗೇಟ್ ಮೂಲಕ ನೀರು ಸೋರಿಕೆಯಾಗುತ್ತಿದೆ. ಸೋರಿಕೆ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು. ಸ್ಲೂಯಿಸ್ ಭದ್ರತೆ ಬಗ್ಗೆ ಸ್ಪಷ್ಟನೆ ನೀಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ.
ಭದ್ರಾ ಡ್ಯಾಂ ಕೂಡ ಸುರಕ್ಷತೆ ಹೊಂದಿಲ್ಲ. ಸುಮಾರು 62 ವರ್ಷಗಳ ಹಿಂದೆ ಗಾರೆ, ಕಲ್ಲು ಸುಣ್ಣ ಬಳಸಿ ಡ್ಯಾಂ ನಿರ್ಮಿಸಲಾಗಿದೆ. ಸಹಜವಾಗಿ ತಳದಲ್ಲಿ ಸೋರುತ್ತಿದೆ. ಇದಕ್ಕಾಗಿ ಸ್ಲೂಯಿಸ್ ಗೇಟ್ ಮೂಲಕ ನೀರು ಸೋರಿಕೆಯಾಗುತ್ತಿದೆ. ಸೋರಿಕೆ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು. ಸ್ಲೂಯಿಸ್ ಭದ್ರತೆ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಬಿಜೆಪಿ ಜಿಲ್ಲಾ ವಕ್ತಾರ ಸತೀಶ್ ಕೊಳೇನಹಳ್ಳಿ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.
ಸೇತುವೆ ಬಳಿ ಆಗಾಗ ಕುಸಿಯುವ ತಡೆಗೋಡೆಗಳನ್ನು ಸರಿಪಡಿಸಿ, ಭದ್ರಗೊಳಿಸಬೇಕು. (5) ಡ್ಯಾಂನ ಸುತ್ತಲೂ ಬೇಲಿ ನಿರ್ಮಿಸಿ ಸುಭದ್ರತೆ ಕಾಪಾಡಬೇಕು. ಡ್ಯಾಂನ ಸುರಕ್ಷತೆಯ ಮೇಲ್ವಿಚಾರಣೆ ನಡೆಸುವ ಕೇಂದ್ರದ ಜಲ ಆಯೋಗ ಡ್ಯಾಂನ ಪುನರುತ್ಥಾನ
ಮತ್ತು ಅಭಿವೃದ್ಧಿ ಯೋಜನೆ ಅಡಿಯಲ್ಲಿ ಡ್ಯಾಂನ ಸುರಕ್ಷತೆಗೆ ₹100 ಕೋಟಿಗಳ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಿದೆ. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ಈ ₹100 ಕೋಟಿ ಬಿಡುಗಡೆ ಮಾಡಲಾರದೆ, ಕರ್ನಾಟಕ ನೀರಾವರಿ ನಿಗಮದ ಮೂಲಕ ಕೇಂದ್ರ ಸರ್ಕಾರಕ್ಕೆ ಮೋರೆ ಹೋಗಿ ಸುಮ್ಮನೆ ಕೈಕಟ್ಟಿ ಕುಳಿತಿದೆ. ಇದು ಸರಿಯಲ್ಲ. ಡ್ಯಾಂನ ಉಳಿವಿಗಾಗಿ ₹100 ಕೋಟಿ ಬಿಡುಗಡೆ ಮಾಡಲಾರದಷ್ಟು ಬಡತನ ರಾಜ್ಯ ಸರ್ಕಾರಕ್ಕೆ ಬಂದಿಲ್ಲ. ಆದ್ದರಿಂದ ಈ ₹100 ಕೋಟಿಯನ್ನು ರಾಜ್ಯ ಸರ್ಕಾರವೇ ಬಿಡುಗಡೆ ಮಾಡಿ, ಡ್ಯಾಂನ ಸುರಕ್ಷತೆ ಕಾಪಾಡಬೇಕು ಎಂದು ಆಗ್ರಹಿಸಿದರು.
1962ರಲ್ಲಿ ಗಾರೆ, ಸುಣ್ಣ ಮತ್ತು ಕಲ್ಲು ಬಳಸಿ ಭದ್ರಾ ಡ್ಯಾಂ ನಿರ್ಮಿಸಲಾಗಿದೆ. ಸಹಜವಾಗಿ ಡ್ಯಾಂನ ತಳಭಾಗದಲ್ಲಿ ನೀರು ಸೋರಿಕೆಯಾಗುತ್ತಿದೆ. ಈ ಸೋರಿಕೆ ತಡೆಗಟ್ಟಬೇಕು. ಹಳೆಯಾದಾಗಿರುವ ಡ್ಯಾಂ ಗೇಟ್ ಗಳನ್ನು ಸರಿಪಡಿಸಿ, ಗಟ್ಟಿಗೊಳಿಸಬೇಕು. ಜರ್ಮನ್ ತಂತ್ರಜ್ಞಾನದಡಿ ಸಿದ್ಧಪಡಿಸಿರುವ ಡ್ಯಾಂ ನಿರ್ವಹಣೆಯ ಕ್ರೇನ್ ಗಳನ್ನು ರೀ ಕಂಡೀಷನ್ ಮಾಡಿಸಬೇಕು ಎಂದು ಒತ್ತಾಯ ಮಾಡಿದರು.
ಭದ್ರಾ ಡ್ಯಾಂ ಸುರಕ್ಷತೆಗೆ ತುರ್ತಾಗಿ ಕ್ರಮ ಕೈಗೊಳ್ಳಬೇಕು. ನೀರು ಸೋರಿಕೆಯಾಗುವುದನ್ನು ತಡೆಗಟ್ಟಬೇಕು. ಶನಿವಾರ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ತುಂಗಭದ್ರಾ ಅಣೆಕಟ್ಟೆಯ 19ನೇ ಕ್ರಸ್ಟ್ ಗೇಟ್ ತುಂಡಾಗಿ ಮುರಿದು ಬಿದ್ದಿದ್ದು, ಅಪಾರ ಪ್ರಮಾಣದ ನೀರು ನದಿಗೆ ಹರಿಸಲಾಗುತ್ತಿದೆ. ಇದರಿಂದ ನದಿ ದಂಡೆಗಳಲ್ಲಿರುವ ಹಳ್ಳಿಗಳಿಗೆ ಬಾರಿ ಪ್ರಮಾಣದಲ್ಲಿ ಆಸ್ತಿ ಪಾಸ್ತಿ ನಷ್ಟವಾಗುವ ಸಂಭವವಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಜಲಾಶಯಗಳ ಭದ್ರತೆ ದೃಷ್ಟಿಯಿಂದ ಯಾವುದೇ ದೂರದೃಷ್ಟಿಯ ಯೋಜನೆ ಹಮ್ಮಿಕೊಂಡಿಲ್ಲ ಎಂದು ಆರೋಪಿಸಿದರು.
ಜಲಸಂಪನ್ಮೂಲ ಖಾತೆ ಹೊಂದಿರುವ ಉಪಮುಖ್ಯಮಂತ್ರಿ ಕಲ್ಲುಬಂಡೆಯಂತಿದ್ದು, ರೈತಪರ ಕಾಳಜಿ ಹೊಂದಿಲ್ಲ. ಕೇವಲ ಗ್ಯಾರಂಟಿ ಯೋಜನೆಗಳ ಮೆಲುಕು ಹಾಕುತ್ತಾ ರಾಜ್ಯದ ರೈತರನ್ನು ದಿವಾಳಿ ಮಾಡಲು ಹೊರಟಿದ್ದಾರೆ ಎಂದು ದೂರಿದರು.
ಭದ್ರಾ ನೀರು ನಿರ್ವಹಣೆ ಸಮರ್ಪಕವಾಗಿ ಆಗುತ್ತಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ್ರು ಛೀಮಾರಿ ಹಾಕಿದ್ರೂ ಉಭಯ ಜಿಲ್ಲಾ ಸಚಿವರುಗಳಾದ ಎಸ್ ಎಸ್ ಮಲ್ಲಿಕಾರ್ಜುನರವರು ಮತ್ತು ಮಧು ಬಂಗಾರಪ್ಪನವರು ಎಚ್ಚೆತ್ತು ಕೊಂಡಿಲ್ಲ. ಒಮ್ಮೆಲೆ ನದಿಗೆ ನೀರನ್ನು ವ್ಯರ್ಥವಾಗಿ ಹರಿಸಲಾಗುತ್ತಿದೆ. ಇದರಿಂದ ನದಿಯ ಆಸುಪಾಸಿನಲ್ಲಿರುವವರಿಗೆ ತೊಂದರೆಯಾಗುತ್ತದೆ ಎಂಬ ಕನಿಷ್ಠ ಜ್ಞಾನವೂ ಇಲ್ಲದಂತಾಗಿದೆ. ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿರುವ ಕೆರೆ ಕಟ್ಟೆಗಳಿಗೆ ಇಂದಿಗೂ ಒಂದು ಹನಿ ನೀರು ಬಂದಿಲ್ಲ. ನೀರು ಇದ್ದಾಗ ಕೆರೆ ಕಟ್ಟೆಗಳನ್ನು ತುಂಬಿಸಿಕೊಂಡರೆ ಒಂದು ಸಣ್ಣ ಕೆರೆ ಕನಿಷ್ಟ 300 ಎಕರೆ ಜಮೀನಿಗೆ ನೀರುಣಿಸುತ್ತದೆ ಮತ್ತು ಕೆರೆಯ ಸುತ್ತ ಏಳೆಂಟು ಕಿ.ಮೀ ದೂರ ಅಂತರ್ಜಲ ಮಟ್ಟ ಕುಸಿಯುವುದಿಲ್ಲ. ಇಂತಹ ಪರೋಕ್ಷ ನೀರಾವರಿ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನರವರಿಗೆ ಕಿಂಚಿತ್ತೂ ಚಿಂತನೆ ಇಲ್ಲ. ರೈತರ ಹಿತಾಸಕ್ತಿಯ ಕಾಳಜಿ ಇಲ್ಲವಾಗಿದೆ ಎಂದು ಆರೋಪಿಸಿದರು.
ಭದ್ರಾ ಡ್ಯಾಂ ಕೂಡ ಸುರಕ್ಷತೆ ಹೊಂದಿಲ್ಲ. ಸುಮಾರು 62 ವರ್ಷಗಳ ಹಿಂದೆ ಗಾರೆ, ಕಲ್ಲು ಸುಣ್ಣ ಬಳಸಿ ಡ್ಯಾಂ ನಿರ್ಮಿಸಲಾಗಿದೆ. ಸಹಜವಾಗಿ ತಳದಲ್ಲಿ ಸೋರುತ್ತಿದೆ. ಇದಕ್ಕಾಗಿ ಸ್ಲೂಯಿಸ್ ಗೇಟ್ ಮೂಲಕ ನೀರು ಸೋರಿಕೆಯಾಗುತ್ತಿದೆ. ಸೋರಿಕೆ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು. ಸ್ಲೂಯಿಸ್ ಭದ್ರತೆ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.
1962ರಲ್ಲಿ ಗಾರೆ, ಸುಣ್ಣ ಮತ್ತು ಕಲ್ಲು ಬಳಸಿ ಭದ್ರಾ ಡ್ಯಾಂ ನಿರ್ಮಿಸಲಾಗಿದೆ. ಸಹಜವಾಗಿ ಡ್ಯಾಂನ ತಳಭಾಗದಲ್ಲಿ ನೀರು ಸೋರಿಕೆಯಾಗುತ್ತಿದೆ. ಈ ಸೋರಿಕೆ ತಡೆಗಟ್ಟಬೇಕು. ಹಳೆಯಾದಾಗಿರುವ ಡ್ಯಾಂ ಗೇಟ್ ಗಳನ್ನು ಸರಿಪಡಿಸಿ, ಗಟ್ಟಿಗೊಳಿಸಬೇಕು. ಜರ್ಮನ್ ತಂತ್ರಜ್ಞಾನದಡಿ ಸಿದ್ಧಪಡಿಸಿರುವ ಡ್ಯಾಂ ನಿರ್ವಹಣೆಯ ಕ್ರೇನ್ ಗಳನ್ನು ರೀ ಕಂಡೀಷನ್ ಮಾಡಿಸಬೇಕು ಎಂದು ಆಗ್ರಹಿಸಿದರು.
ಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶಿವರಾಜ್ ಪಾಟೀಲ್, ರೈತ ಮೋರ್ಚಾ ಮುಖಂಡ ಆರನೇಕಲ್ಲು ವಿಜಯಕುಮಾರ ಉಪಸ್ಥಿತರಿದ್ದರು.