Home ನವದೆಹಲಿ ಬೆಳಗಾವಿ ಅಧಿವೇಶನದಲ್ಲಿ ವಿಪಕ್ಷಗಳಿಗೆ ಸಖತ್ ತಿರುಗೇಟು ನೀಡಲು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ರೆಡಿಯಂತೆ!
ನವದೆಹಲಿಬೆಂಗಳೂರು

ಬೆಳಗಾವಿ ಅಧಿವೇಶನದಲ್ಲಿ ವಿಪಕ್ಷಗಳಿಗೆ ಸಖತ್ ತಿರುಗೇಟು ನೀಡಲು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ರೆಡಿಯಂತೆ!

Share
ಸಿದ್ದರಾಮಯ್ಯ
Share

ಬೆಂಗಳೂರು: ಪಕ್ಷ, ಅಧಿವೇಶನ, ರಾಜಕೀಯ ಚರ್ಚೆಗಳು ಹಾಗೂ ಎಂಎಲ್ ಸಿ ಸೀಟುಗಳು ಬಗ್ಗೆ ಚರ್ಚೆಯನ್ನು ನಡೆಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

READ ALSO THIS STORY: ಇನ್ಮುಂದೆ ಗ್ರಾಮೀಣ ಆಸ್ತಿಗಳಿಗೆ ಅರ್ಜಿದಾರರು ಅರ್ಜಿ ಸಲ್ಲಿಸಿದ 15 ದಿನಗಳಲ್ಲೇ ಇ-ಖಾತೆ!

ಡಿಸಿಎಂ ಡಿಕೆ ಶಿವಕುಮಾರ್ ಅವರ ಮನೆಯಲ್ಲಿ ಸಿದ್ದರಾಮಯ್ಯ ಟಿಫನ್ ಸೇವಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಾಂಗ್ರೆಸ್ ನ ಶಾಸಕರೆಲ್ಲರೂ ಒಗ್ಗಟ್ಟಾಗಿದ್ದಾರೆ:

ನಾಯಕತ್ವ ಬದಲಾವಣೆಯ ಬಗ್ಗೆ ಶಾಸಕರ ನಿಲುವುಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ನ ಯಾವ ಶಾಸಕರಲ್ಲಿಯೂ ಬೇಧವಿಲ್ಲ. ಶಾಸಕರು ತಮ್ಮ ಅಭಿಪ್ರಾಯಗಳನ್ನು ನೀಡಿದ್ದಾರಷ್ಟೇ. ಕಾಂಗ್ರೆಸ್ ನ ಎಲ್ಲ ಶಾಸಕರೂ
ಅಧಿವೇಶನದಲ್ಲಿ ಭಾಗವಹಿಸಿ, ವಿಪಕ್ಷಗಳನ್ನು ಒಗ್ಗಟ್ಟಿನಿಂದ ಎದುರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಳಗಾವಿ ಅಧಿವೇಶನದಲ್ಲಿ ವಿಪಕ್ಷಗಳು ಎತ್ತಬಹುದಾದ ವಿಚಾರಗಳನ್ನು ಸಮರ್ಥವಾಗಿ ಒಗ್ಗಟ್ಟಿನಿಂದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಎದುರಿಸಲಿದ್ದೇವೆ. ನಂತರ ಸರ್ವಪಕ್ಷ ಸಭೆಯನ್ನು ನಡೆಸುವ ಬಗ್ಗೆ ಚರ್ಚಿಸಲಾಗಿದ್ದು, ರಾಜ್ಯದ ಯೋಜನೆಗಳಿಗೆ ವೇಗ ನೀಡಲು ಎಲ್ಲ ಪಕ್ಷದ ಸಂಸದರ ಸಹಯೋಗವನ್ನು ಕೋರಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

Share

Leave a comment

Leave a Reply

Your email address will not be published. Required fields are marked *