SUDDIKSHANA KANNADA NEWS/DAVANAGERE/DATE:03_12_2025
ಬೆಂಗಳೂರು: “ಕೆಲವೊಮ್ಮೆ, ಯಾರ ಘನತೆ ಬೇಗ ನೆಲಕಚ್ಚುತ್ತದೆ ಎಂದು ನೋಡಲು ದೆಹಲಿಯಲ್ಲಿ ರೂಪಾಯಿ ಮತ್ತು ಕೇಂದ್ರ ಸರ್ಕಾರದ ನಡುವೆ ಪೈಪೋಟಿ ನಡೆಯುತ್ತಿರುವಂತೆ ಭಾಸವಾಗುತ್ತದೆ.” ಎಂದು ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದ್ದಾರೆ.
READ ALSO THIS STORY: ಪೋಷಕರೇ ಮರೆಯದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ.. ಡಿ.21 ರಿಂದ 24ರವರೆಗೆ ಅವಕಾಶ…1.40 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ
ಏನೇ ಆದರೂ, ಈ ವಿಷಯದಲ್ಲಿ ನಾನು ವಿಶ್ವಗುರುವನ್ನು ಒಪ್ಪುತ್ತೇನೆ! ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯವಾಡಿದ್ದಾರೆ.
ವಿಶೇಷ ಸ್ಥಾನಮಾನದ ಆಶಯಗಳು:
ಕಲ್ಯಾಣ ಕರ್ನಾಟಕದ ಸಮಗ್ರ ಏಳಿಗೆಗೆ “ಆರ್ಟಿಕಲ್ 371 (J )“ ವರದಾನವಾಗಿದ್ದರೂ, ಸಮರ್ಪಕ ಅನುಷ್ಠಾನದಲ್ಲಿ ಶ್ರದ್ದೆ ಇದ್ದರೆ ಮಾತ್ರ ವಿಶೇಷ ಸ್ಥಾನಮಾನದ ಆಶಯಗಳು ಈಡೇರಲಿದೆ ಎಂದಿದ್ದಾರೆ. ನ್ಯಾಯಾಲಯದ ಮುಂದೆ ಹಲವು ವರ್ಷಗಳಿಂದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ 47 ಪ್ರಕರಣಗಳು ಬಾಕಿ ಇರುವುದರಿಂದ ಆರ್ಟಿಕಲ್ 371ಜೆ ಅಡಿಯಲ್ಲಿನ ನೇಮಕಾತಿ, ಮುಂಬಡ್ತಿ ವಿಷಯಗಳಲ್ಲಿ ಹಿನ್ನೆಡೆ ಉಂಟಾಗಿದೆ. ಇಲಾಖೆಗಳಲ್ಲಿ ನಿಗದಿತ ಕಾಲಮಿತಿಯೊಳಗೆ ನೇಮಕಾತಿ ಮತ್ತು ಮುಂಬಡ್ತಿಗಳನ್ನು ಹೊಂದದೇ ಅಭ್ಯರ್ಥಿಗಳು ಅವಕಾಶ ವಂಚಿತರಾಗಿ ಅನ್ಯಾಯಕ್ಕೊಳಗಾಗಿರುತ್ತಾರೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಉಚ್ಛ ನ್ಯಾಯಾಲಯದ ಬೆಂಗಳೂರು, ಕಲಬುರಗಿ ಹಾಗೂ ಧಾರವಾಡ ವಿಭಾಗೀಯ ಪೀಠಗಳಲ್ಲಿ ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿ, ಮುಂಬಡ್ತಿ ಹಾಗೂ ವಿವಿಧ ಸೇವಾ ವಿಷಯಗಳಿಗೆ ಸಂಬಂಧಿಸಿದ ಪ್ರಕರಣಗಳ ಇತ್ಯರ್ಥಪಡಿಸಲು ಅಗತ್ಯ ಕ್ರಮವಹಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.
ಅಭ್ಯರ್ಥಿಗಳು, ಅಧಿಕಾರಿಗಳು ಮತ್ತು ನೌಕರರ ಭವಿಷ್ಯದ ಹಿತದೃಷ್ಟಿಯಿಂದ ಮಾನ್ಯ ಕರ್ನಾಟಕ ಉಚ್ಚನ್ಯಾಯಲಯ ಹಾಗೂ ವಿವಿಧ ವಿಭಾಗೀಯ ಪೀಠಗಳಲ್ಲಿ ಇತ್ಯರ್ಥವಾಗದೇ ಉಳಿದಿರುವ ಪ್ರಕರಣಗಳಲ್ಲಿ ಸ್ಪಷ್ಟವಾದ ಅಗತ್ಯ ಮಾಹಿತಿಯನ್ನು ಕಾಲಮಿತಿಯೊಳಗೆ ಸಲ್ಲಿಸಬೇಕು ಹಾಗೂ ಸರ್ಕಾರಿ ವಕೀಲರೊಂದಿಗೆ ಸಮನ್ವಯ ಸಾಧಿಸಿ ಎಲ್ಲಾ ಪ್ರಕರಣಗಳನ್ನು ಕಾಲಮಿತಿಯೊಳಗೆ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಲು ಸಂಬಂಧಪಟ್ಟ ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ನಿರ್ದೇಶನ ನೀಡಬೇಕು ಎಂದು ತಿಳಿಸಿದ್ದೇನೆ ಎಂದಿದ್ದಾರೆ.





Leave a comment