Home ದಾವಣಗೆರೆ ಮೆಕ್ಕೆಜೋಳ ಬೆಳೆಗಾರರಿಗೆ ಗುಡ್ ನ್ಯೂಸ್: ಡಿಸ್ಟಿಲರಿಗಳ ಎಥೆನಾಲ್ ಉತ್ಪಾದನೆಗೆ ಮೆಕ್ಕೆಜೋಳ ಖರೀದಿಸಲು ಸೂಚನೆ
ದಾವಣಗೆರೆಬೆಂಗಳೂರುವಾಣಿಜ್ಯ

ಮೆಕ್ಕೆಜೋಳ ಬೆಳೆಗಾರರಿಗೆ ಗುಡ್ ನ್ಯೂಸ್: ಡಿಸ್ಟಿಲರಿಗಳ ಎಥೆನಾಲ್ ಉತ್ಪಾದನೆಗೆ ಮೆಕ್ಕೆಜೋಳ ಖರೀದಿಸಲು ಸೂಚನೆ

Share
ಮೆಕ್ಕೆಜೋಳ
Share

ದಾವಣಗೆರೆ: ಕೆಂದ್ರ ಸರ್ಕಾರದ ಬೆಂಬಲ ಬೆಲೆಯಡಿ ಧಾನ್ಯ ಆಧಾರಿತ ಎಥನಾಲ್ ಉತ್ಪಾದಿಸುವ ಡಿಸ್ಟಿಲರಿಗಳ ಮೂಲಕ ಮೆಕ್ಕೆಜೋಳ ಖರೀದಿಗೆ ಅಗತ್ಯ ಸಿದ್ದತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧಸ್ವಾಮಿ ಸೂಚಿಸಿದರು. 

ಈ ಸುದ್ದಿಯನ್ನೂ ಓದಿ: BIG BREAKING: ಡ್ರಗ್ಸ್ ಸೇವಿಸಿ ಈಶ್ವರ ಫ್ಲೆಕ್ಸ್ ಗೆ ಬೆಂಕಿ ಹಚ್ಚಿದ್ದ ಕಿಡಿಗೇಡಿ ಬಂಧನ: ಹಿಂದೂ ಸಂಘಟನೆಗಳ ಆಕ್ರೋಶ!

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿಗೆ ಮುಂಗಾರು ಹಂಗಾಮಿನ ಅವಧಿಯಲ್ಲಿ ಜಿಲ್ಲೆಯದ್ಯಂತ ಅತೀ ಹೆಚ್ಚು ಮೆಕ್ಕೆಜೋಳ ಬೆಳೆಯಲಾಗಿದೆ. ಅದರಂತೆ ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್‍ಗೆ ರೂ.2400 ಬೆಂಬಲ ಬೆಲೆ ಘೋಷಿಸಿದ್ದು, ಪ್ರತಿ ರೈತರಿಂದ 20 ಕ್ವಿಂಟಾಲ್ ಜೋಳ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.

ಆದುದರಿಂದ ಎಪಿಎಂಸಿಗೆ ಪ್ರತಿದಿನ 3 ಸಾವಿರ ಕ್ವಿಂಟಾಲ್ ಆವಕವಾಗುತ್ತಿವೆ. ಬೆಂಬಲ ಬೆಲೆ ಘೋಷಣೆಯಾದ ನಂತರ ಜಿಲ್ಲೆಯ ಕೃಷಿ ಮಾರುಕಟ್ಟೆಗಳಲ್ಲಿ ಪ್ರಸ್ತುತ ಪ್ರತಿ ಕ್ವಿಂಟಾಲ್‍ಗೆ ರೂ.1600 ರಿಂದ 1900ರ ವರೆಗೆ ಮಾರಾಟವಾಗುತ್ತಿದೆ. ಧಾನ್ಯ ಆಧಾರಿತ ಎಥನಾಲ್ ಉತ್ಪಾದಿಸುವ ಡಿಸ್ಟಲರಿಗಳನ್ನು ಸಂಪರ್ಕಿಸಿ ಹತ್ತಿರದ ಪಿಸಿಎಸ್‍ಗಳ ಮೂಲಕ ಎಥನಾಲ್‍ಗೆ ಅಗತ್ಯಕ್ಕೆ ತಕ್ಕಂತೆ ಖರೀದಿಗೆ ತ್ವರಿತವಾಗಿ ಕ್ರಮವಹಿಸುವುದರ ಜತೆಗೆ ರೈತರಿಂದ ಖರೀದಿಸಿದ ಧಾನ್ಯಗಳ ಗುಣಮಟ್ಟ ಕಾಯ್ದುಕೊಳ್ಳಬೇಕು. ಅಬಕಾರಿ ಇಲಾಖೆ, ಸಹಕಾರ ಮಂಡಳವು ಜಿಲ್ಲೆಯಲ್ಲಿನ ಎಥನಾಲ್ ಉತ್ಪಾದಿಸುವ ಡಿಸ್ಟಿಲರಿಗಳನ್ನು ಸಂಪರ್ಕಿಸಿ ಖರೀದಿಗೆ ಬೇಕಾಗುವ ಅಂಕಿಅಂಶಗಳನ್ನು ಸಂಗ್ರಹಿಸಲು ಸೂಚನೆ ನೀಡಿದರು.

ಸಭೆಯಲ್ಲಿ ಆಹಾರ ಮತು ನಾಗರೀಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಕೆ.ಪಿ.ಮಧುಸೂದನ್, ಅಬಕಾರಿ ಉಪ ಆಯುಕ್ತ ಜುನೈದ್, ಸಹಕಾರ ಇಲಾಖೆ ಉಪನಿಬಂಧಕ ಮಧು ಶ್ರೀನಿವಾಸ್, ಎಪಿಎಂಸಿ ಇಲಾಖೆ ಗಿರೀಶ್ ನಾಯ್ಕ್ ಸೇರಿದಂತೆ ಮತ್ತಿತರರು ಇದ್ದರು.

Share

Leave a comment

Leave a Reply

Your email address will not be published. Required fields are marked *