Home ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ: ದೂಡಾ ಸದಸ್ಯೆ ಎಂ.ಆ‌ರ್. ವಾಣಿ!
ದಾವಣಗೆರೆಬೆಂಗಳೂರು

ಸಂಸದೆ ಪ್ರಭಾ ಮಲ್ಲಿಕಾರ್ಜುನರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ: ದೂಡಾ ಸದಸ್ಯೆ ಎಂ.ಆ‌ರ್. ವಾಣಿ!

Share
Share

ದಾವಣಗೆರೆ: ಶಿಕ್ಷಣ ಮತ್ತು ವೈದ್ಯಕೀಯ ವಿಭಾಗದಲ್ಲಿ ತಿಳುವಳಿಕೆ ಇರುವ ಮತ್ತು ಬಡವರ ಬಗ್ಗೆ ಅಪಾರ ಕಾಳಜಿಯನ್ನು ಹೊಂದಿರುವ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಕರ್ನಾಟಕದ ಮೊದಲ ಮಹಿಳಾ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಬೇಕು ಎಂದು ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಸದಸ್ಯೆ ಎಂ.ಆ‌ರ್. ವಾಣಿ ಆಗ್ರಹಿಸಿದ್ದಾರೆ.

ದಾವಣಗೆರೆಯು ಮಧ್ಯಕರ್ನಾಟಕ ಪ್ರದೇಶವಾಗಿದ್ದು ಮಧ್ಯ ಕರ್ನಾಟಕದಿಂದ ಮಹಿಳಾ ಮುಖ್ಯಮಂತ್ರಿಯನ್ನಾಗಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಆಯ್ಕೆ ಮಾಡಿದರೆ ರಾಜ್ಯದಲ್ಲಿ ಬಹುದೊಡ್ಡ ಸಮಾಜವಾಗಿರುವ ಲಿಂಗಾಯಿತ ಸಮಾಜಕ್ಕೂ ಹಾಗೂ ಮಹಿಳೆಯರಿಗೂ ನ್ಯಾಯ ಒದಗಿಸಿದಂತಾಗುತ್ತದೆ ಎಂದು ಅವರು ಅಭಿಪ್ರಾಯಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ನಮ್ಮ ದೇಶಕ್ಕೆ ಮೊದಲ ಮಹಿಳಾ ಪ್ರಧಾನಿಯನ್ನು ನೀಡಿದ ಮೊದಲ ಪಕ್ಷವಾಗಿದ್ದು, ಇಂದಿರಾಗಾಂಧಿ ಅವರು ಕಾಂಗ್ರೆಸ್ ಪಕ್ಷದ ಮೂಲಕ ಪ್ರಧಾನಿಯಾಗದರು. ಇಂದಿರಾಗಾಂಧಿಯವರು ಗರೀಬಿ ಹಟಾವೋ ಮೂಲಕ ಕಾಂಗ್ರೆಸ್ ಪಕ್ಷವನ್ನು ಮಂಚೂಣಿಯಲ್ಲಿರುವಂತೆ ಮಾಡಿದ ಉಕ್ಕಿನ ಮಹಿಳೆಯಾಗಿದ್ದಾರೆ. ಅದೇ ರೀತಿ ಕರ್ನಾಟಕದ ಮೊದಲ ಮಹಿಳಾ ಮುಖ್ಯಮಂತ್ರಿಯನ್ನಾಗಿ ಪ್ರಭಾ ಅವರನ್ನು ಆಯ್ಕೆ ಮಾಡಿದರೆ ರಾಜ್ಯವು ಸರ್ವತೋಮುಖ ಅಭಿವೃದ್ಧಿ ಹೊಂದುವುದರ ಜೊತೆಗೆ ಮಹಿಳೆಯರು ಆರ್ಥಿಕವಾಗಿ ಸಬಲರಾಗುತ್ತಾರೆ ಎಂದು ಇಂಗಿತ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಶೇ.50 ರಷ್ಟು ಮಹಿಳೆಯರಿದ್ದ, ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಸಂಪೂರ್ಣ ಗ್ಯಾರಂಟಿ ಯೋಜನೆಗಳ ಮೂಲಕ ಆರ್ಥಿಕವಾಗಿ ಸಬಲರಾಗುವಂತೆ ಮಾಡಿದೆ. ಅದೇ ರೀತಿ ಸಂಸದೆ ಪ್ರಭಾ ಅವರು ಭಾರತದಲ್ಲಿ ಬೆಂಗಳೂರು ಸಿಲಿಕಾನ್ ವ್ಯಾಲಿ ಆಗಿದ್ದು, ಕರ್ನಾಟಕವನ್ನು ವಿಶ್ವದಲ್ಲಿಯೇ ಪ್ರಸಿದ್ದಿ ಮಾಡಲು ಶ್ರಮಿಸುತ್ತಾರೆ. ಅಲ್ಲದೇ ಉಚಿತ ಆರೋಗ್ಯ ಮತ್ತು ಉಚಿತ ಶಿಕ್ಷಣವನ್ನು ರಾಜ್ಯದಲ್ಲಿ ನೀಡಲು ಪ್ರಾಮಾಣಿಕವಾಗಿ ಶ್ರಮಿಸುತ್ತಾರೆ. ಆದ್ದರಿಂದ ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಕರ್ನಾಟಕದ ಮೊದಲ ಮಹಿಳಾ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲು ಕೇಂದ್ರದಲ್ಲಿ ಧ್ವನಿಯೆತ್ತಬೇಕು ಎಂದು ಅವರು ಆಗ್ರಹಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *