Home ಕ್ರೀಡೆ 23 ಕಂಬಳೋತ್ಸವಕ್ಕೆ ತಲಾ ರೂ.5ಲಕ್ಷ ಅನುದಾನ ಬಿಡುಗಡೆ!
ಕ್ರೀಡೆದಾವಣಗೆರೆನವದೆಹಲಿಬೆಂಗಳೂರು

23 ಕಂಬಳೋತ್ಸವಕ್ಕೆ ತಲಾ ರೂ.5ಲಕ್ಷ ಅನುದಾನ ಬಿಡುಗಡೆ!

Share
Share

ಬೆಳಗಾವಿಸುವರ್ಣ ವಿಧಾನಸೌಧ: ಜಿಲ್ಲಾ ಕಂಬಳ ಸಮಿತಿಯಿಂದ ಅನುಮೋದನೆಗೊಂಡ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 23 ಕಂಬಳೋತ್ಸವಗಳಿಗೆ ಸರ್ಕಾರದಿಂದ ತಲಾ ರೂ.5 ಲಕ್ಷ ಅನುದಾನ ಬಿಡುಗಡೆ ಮಾಡುವುದಾಗಿ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯಲ್ಲಿನ ಪ್ರಶ್ನೋತ್ತರ ಕಲಾಪದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿ ಅವರು ಮಾತನಾಡಿದರು.

2025-26ನೇ ಸಾಲಿನಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯೋಜಿಸಲಾಗುವ ಕಂಬಳ ಉತ್ಸವಗಳಿಗೆ ಅನುದಾನ ಕೋರಿ ಪ್ರಸ್ತಾವನೆಗಳು ಸ್ವೀಕೃತವಾಗಿವೆ. ಇದಕ್ಕೆ ಸರ್ಕಾರದಿಂದ ಅನುಮೋದನೆ ನೀಡಿ ಅನುದಾನ ಬಿಡುಗಡೆಗೆ ಆರ್ಥಿಕ ಇಲಾಖೆ ಕಡತ ರವಾನಿಸಲಾಗಿದೆ. 2024-25ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ,ಮಂಗಳೂರು, ನರಿಂಗಾಣ, ಮೂಡಬಿದ್ರೆ, ಐಕಳ, ಜಪ್ಪು, ಪುತ್ತೂರು, ಬಂಟ್ವಾಳ, ಉಪ್ಪಿನಂಗಡಿ ಮತ್ತು ವೇಣೂರಿನಲ್ಲಿ ಆಯೋಜಿಸಿದ್ದ ಕಂಬಳೋತ್ಸವಗಳಿಗೆ ತಲಾ ರೂ.5 ಲಕ್ಷದಂತೆ ಒಟ್ಟು ರೂ.50 ಲಕ್ಷಗಳನ್ನು ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ಶಾಸಕರುಗಳ ಅಭಿಪ್ರಾಯದಂತೆ 23 ಕಂಬಳೋತ್ಸವಗಳಿಗೆ
ಅನುದಾನ ಬಿಡುಗಡೆ ಕ್ರಮ ಕೈಗೊಳ್ಳುವ ಆಶ್ವಾಸನೆಯನ್ನು ಸಚಿವ ಹೆಚ್.ಕೆ.ಪಾಟೀಲ್ ನೀಡಿದರು.

ಸಚಿವರ ನಿರ್ಧಾರವನ್ನು ಉಡುಪಿ ಹಾಗೂ ದಕ್ಷಿಣ ಕನ್ನಡದ ಶಾಸಕರುಗಳು ಒಕ್ಕೊರಲಿನಿಂದ ಅಭಿನಂದಿಸಿದರು.

ರೂ.5 ಕೋಟಿ ವೆಚ್ಚದಲ್ಲಿ ಉಡುಪಿ ಲೈಟ್ ಹೌಸ್ ಬೀಚ್ ಅಭಿವೃದ್ಧಿ:

ರೂ.5 ಕೋಟಿ ವೆಚ್ಚದಲ್ಲಿ ಉಡುಪಿ ಜಿಲ್ಲೆಯ ಲೈಟ್ ಹೌಸ್ ಬೀಚ್ ಅಭಿವೃದ್ಧಿಗೆ ಸರ್ಕಾರ ಮಂಜೂರಾತಿ ನೀಡಿದೆ. ಕಾಮಗಾರಿಯನ್ನು ಕರ್ನಾಟಕ ಪ್ರವಾಸೋದ್ಯಮ ಮೂಲಸೌಕರ್ಯ ನಿಗಮದಿಂದ ಅನುಷ್ಠಾನಗೊಳಿಸಲಾಗುವುದು ಎಂದು ಸಚಿವ ಹೆಚ್.ಕೆ.ಪಾಟೀಲ್ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರಶ್ನೋತ್ತರ ಕಲಾಪದಲ್ಲಿ ಉತ್ತರಿಸಿದರು.

ಕರಾವಳಿ ಭಾಗದ ಪ್ರವಾಸೋದ್ಯಮಕ್ಕೆ ಸರ್ಕಾರ ಇಂಬು ನೀಡುತ್ತಿದೆ. ಕಾಪು ವಿಧಾನಸಭಾ ಕ್ಷೇತ್ರ ಪಡುಬಿದ್ರಿ ನಡಿಘಟ್ಟ ಬೀಚ್ ರಸ್ತೆಯ ಎಂಡ್ ಪಾಯಿಂಟ್‌ನಲ್ಲಿ ಸಂಪರ್ಕ ಸೇತುವೆ ಹಾಗೂ ಕೂಡು ರಸ್ತೆ ನಿಮಾರ್ಣ ಕಾಮಗಾರಿಯನ್ನು ರೂ.75 ಲಕ್ಷದಲ್ಲಿ ಪೂರ್ಣಗೊಳಿಸಲಾಗಿದೆ. 2025-26ನೇ ಸಾಲಿಗೆ ಆಯವ್ಯಯದಲ್ಲಿ ಪ್ರವಾಸಿ ತಾಣಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ರೂ.86 ಕೋಟಿಗಳನ್ನು ಒದಗಿಸಲಾಗಿದೆ. ಇದರಲ್ಲಿ ಪ್ರವಾಸಿ ತಾಣಗಳ ಆದ್ಯತೆಗೆ ಅನುಗುಣವಾಗಿ ಪರಿಶೀಲಿಸಿ ರೂ.14 ಕೋಟಿ ವೆಚ್ಚದ ನೂತನ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಕರ್ನಾಟಕ ಪ್ರವಾಸೋದ್ಯಮ ನೀತಿ 2024-29 ರಲ್ಲಿ ಕಾಪು ತಾಲ್ಲೂಕಿನ ಕಾಪು ಬೀಚ್, ಲೈಟ್ ಹೌಸ್, ಪಡುಬಿದ್ರೆ ಎಂಡ್ ಪಾಯಿಂಟ್ ಬ್ಲೂ ಫ್ಲಾಗ್ ಬೀಚ್, ಕಾಪು ಮಾರಿಗುಡಿ ದೇವಸ್ಥಾನ, ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಉಡುಪಿ ಕುಂಜರುಗಿರಿಯ ಶ್ರೀ ದುರ್ಗಾ ದೇವಿ ದೇವಸ್ಥಾನ ಹಾಗೂ ಮುಟ್ಟು ರಾಕ್ ದ್ವೀಪಗಳನ್ನು ಪ್ರವಾಸಿ ತಾಣಗಳಾಗಿ ಅಭಿವೃದ್ಧಿಗೊಳಿಸಲು ಗುರುತಿಸಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.

ರೂ.5.75 ಕೋಟಿ ವೆಚ್ಚದಲ್ಲಿ ಬಿಳಿಗಿರಿ ರಂಗನಬೆಟ್ಟದ ಅಭಿವೃದ್ಧಿ:

ಪುರಾಣ ಪ್ರಸಿದ್ಧ ಬಿಳಿಗಿರಿ ರಂಗನಬೆಟ್ಟ ಕ್ಷೇತ್ರದಲ್ಲಿ ಸುಸಜ್ಜಿತ ಬಸ್ ನಿಲ್ದಾಣ, ವೀಕ್ಷಣಾ ಗೋಪುರಗಳು, ದಾಸೋಹ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ರೂ.5.75 ಕೋಟಿ ವೆಚ್ಚದಲ್ಲಿ ವಿವರವಾದ ಪರಿಕಲ್ಪನೆ ರೂಪಿಸಲಾಗಿದೆ. ಶೀಘ್ರದಲ್ಲಿ ಅನುದಾನ ಬಿಡುಗಡೆ ಮಾಡುವುದಾಗಿ ಸಚಿವ ಹೆಚ್.ಕೆ.ಪಾಟೀಲ್ ಕೊಳ್ಳೇಗಾಲದ ಶಾಸಕ ಕೃಷ್ಣಮೂರ್ತಿ.ಎ.ಆರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರಶ್ನೋತ್ತರ ಕಲಾಪದಲ್ಲಿ ಉತ್ತರಿಸಿದರು.

ಪ್ರವಾಸೋದ್ಯಮ ಇಲಾಖೆಯಿಂದ ಬಿಳಿಗಿರಿ ರಂಗನಬೆಟ್ಟದ ದೇವಾಲಯದ ಸುತ್ತ ರೂ.1 ಕೋಟಿ ವೆಚ್ಚದಲ್ಲಿ ನೆಲಹಾಸು ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ. ಇದರೊಂದಿಗೆ ರೂ.1.74 ಕೋಟಿ ವೆಚ್ಚದಲ್ಲಿ ದೇವಾಲಯದ ಬಳಿ ಮೆಟ್ಟಿಲು ಹಾಗೂ ರೈಲಿಂಗ್ಸ್ ನಿರ್ಮಾಣ, ಕಲ್ಯಾಣಿ ರಸ್ತೆ ಮತ್ತು ರಥದ ಬೀದಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿದೆ. ದೇವಸ್ತಾನದ ಪಾದುಕೆಯಿಂದ ರಾಜಗೋಪುರಕ್ಕೆ ಕಾಲಂಗಳೊAದಿಗೆ ಮೆಟ್ಟಿಲುಗಳ ವಿನ್ಯಾಸ ಮಾಡುವಲ್ಲಿ ದೊಡ್ಡ ಬಂಡೆಗಳು ಕಂಡು ಬಂದ ಕಾರಣ ಕಾಮಗಾರಿ ಮರುವಿನ್ಯಾಸವನ್ನು ಲೋಕೋಪಯೋಗಿ ಇಲಾಖೆಯಿಂದ ಸಿದ್ಧಪಡಿಸಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಅರ್ಚಕರೊಂದಿಗೆ ಚರ್ಚಿಸಿ ಅನುದಾನ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸುವುದಾಗಿ ಸಚಿವ ಹೆಚ್.ಕೆ.ಪಾಟೀಲ್ ಭರವಸೆ ನೀಡಿದರು.

Share

Leave a comment

Leave a Reply

Your email address will not be published. Required fields are marked *