Home ದಾವಣಗೆರೆ ಕಬ್ಬು ಬೆಳೆಗಾರರ ಸಮಸ್ಯೆಗೆ ಪರಿಹರಿಸಲು ಕ್ರಮ: ಸಿಎಂ ಸಿದ್ದರಾಮಯ್ಯರಿಗೆ ರೈತ ಮುಖಂಡರಿಂದ ಸನ್ಮಾನ!
ದಾವಣಗೆರೆನವದೆಹಲಿಬೆಂಗಳೂರು

ಕಬ್ಬು ಬೆಳೆಗಾರರ ಸಮಸ್ಯೆಗೆ ಪರಿಹರಿಸಲು ಕ್ರಮ: ಸಿಎಂ ಸಿದ್ದರಾಮಯ್ಯರಿಗೆ ರೈತ ಮುಖಂಡರಿಂದ ಸನ್ಮಾನ!

Share
Share

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುವರ್ಣಸೌಧದಲ್ಲಿ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆ ನಡೆಸಿದರು.

ಕಬ್ಬು ಬೆಳೆಗಾರರು ಸೇರಿದಂತೆ ಎಲ್ಲಾ ರೈತರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದ್ದು, ರೈತರ ಎಲ್ಲಾ ಬೇಡಿಕೆಗಳನ್ನು ಪರಿಶೀಲಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ನಮ್ಮ ಸರ್ಕಾರ ಬಂದ ಬಳಿಕ ಪ್ರತಿ ಲೀಟರ್ ಹಾಲಿಗೆ ರೂ.5 ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಪ್ರಸ್ತುತ ಪ್ರತಿದಿನ ಒಂದು ಕೋಟಿ ಲೀಟರ್ ಹಾಲು ಖರೀದಿಗೆ ರೂ.5ಕೋಟಿ ಪ್ರೋತ್ಸಾಹ ಧನವನ್ನು ರೈತರಿಗೆ ನೀಡುತ್ತಿದ್ದೇವೆ.

ಸಕ್ಕರೆ ಕಾರ್ಖಾನೆಗಳು ಕಬ್ಬಿನ ತೂಕದಲ್ಲಿ ಮೋಸವನ್ನು ತಪ್ಪಿಸಲು, ಇಳುವರಿ ನಿಗದಿಯನ್ನು ವೈಜ್ಞಾನಿಕವಾಗಿ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಭೂ ಸುಧಾರಣಾ ಕಾಯ್ದೆಗೆ ಹಿಂದಿನ ಸರ್ಕಾರ ಮಾಡಿರುವ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಕಬ್ಬು ಬೆಳೆಗಾರರ ಹಾಗೂ ಮೆಕ್ಕೆಜೋಳ ರೈತರ ಸಮಸ್ಯೆಗಳನ್ನು ಬಗೆಹರಿಸಿ ರೈತರ ಬೇಡಿಕೆಗಳನ್ನು ಈಡೇರಿಸಿರುವ ಹಿನ್ನೆಲೆಯಲ್ಲಿ ವಿವಿಧ ರೈತ ಸಂಘಗಳ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರನ್ನು ಸನ್ಮಾನಿಸಿದರು.

Share

Leave a comment

Leave a Reply

Your email address will not be published. Required fields are marked *