SUDDIKSHANA KANNADA NEWS/ DAVANAGERE/ DATE:18-08-2024
ದಾವಣಗೆರೆ: ಗವರ್ನರ್ ಅವರು ಯಾವ ರೀತಿಯಲ್ಲಿ ಪ್ರಾಸಿಕ್ಯೂಷನ್‍ಗೆ ಅನುಮತಿ ಕೊಟ್ಟಿದ್ದಾರೆಂದು ಗೊತ್ತಿಲ್ಲ. ಕಾನೂನು ಹೋರಾಟ ಮಾಡುತ್ತೇವೆ. ಕೇಂದ್ರದಿಂದ ರಾಜ್ಯಪಾಲ ಗೆಹ್ಲೋಟ್ ಅವರಿಗೆ ಒತ್ತಡ ಇರುವುದು ಸ್ಪಷ್ಟವಾಗುತ್ತಿದೆ. ರಾಜ್ಯಪಾಲರ ಭವನ ರಾಜಕೀಯ ನಿವಾಸವಾಗುತ್ತಿದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್ ಪ್ರತಿಕ್ರಿಯೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಮೌಖಿಕವಾಗಿ, ಪತ್ರ ವ್ಯವಹಾರ ಮಾಡಿಲ್ಲ. ಈ ಬಗ್ಗೆ ನಾವು ರಾಜ್ಯಪಾಲರಿಗೆ ಉತ್ತರ ಕೊಟ್ಟಿದ್ದೆವು. ನಾವು ಶೋಕಾಸ್ ನೋಟಿಸ್‍ಗೆ ಎಳೆ ಎಳೆಯಾಗಿ ಉತ್ತರ ಕೊಟ್ಟಿದ್ದೆವು. ಆದರೂ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ ಕೊಟ್ಟಿದ್ದಾರೆ. ರಾಜ್ಯಪಾಲರ ಕಚೇರಿ ದುರ್ಬಳಕೆ ಆಗಿದೆ ಎಂದು ಕಿಡಿಕಾರಿದ್ದಾರೆ.

ನಮಗೆ ಕಾನೂನು ಹೋರಾಟ ಅನಿವಾರ್ಯವಾಗಿದೆ. ಮುಂದಿನ ಕಾನೂನು ರೂಪುರೋಷಗಳ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ. ಶೋಕಾಸ್ ನೋಟಿಸ್ ಕೊಟ್ಟಾಗಲೇ ಇದು ಷಡ್ಯಂತ್ರ ಎಂಬುದು ಗೊತ್ತಾಯ್ತು. ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಬೇಕೆಂದು ಬಿಜೆಪಿ ಪ್ರಯತ್ನ ಮಾಡುತ್ತಿದೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ ಎಂದು ತಿಳಿಸಿದ್ದಾರೆ.
ಬಿಜೆಪಿಯವರಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆಯೇ ಇಲ್ಲ. ಬಿಜೆಪಿಯವರು ಸಂವಿಧಾನ ಬಾಹಿರ ಕೆಲಸ ಮಾಡುತ್ತಿದ್ದಾರೆ ಎಂದು ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಆರೋಪಿಸಿದ್ದಾರೆ.