SUDDIKSHANA KANNADA NEWS/DAVANAGERE/DATE:14_12_2025
ಬೆಂಗಳೂರು: ಹಿರಿಯ ಶಾಸಕರು, ಮಾಜಿ ಸಚಿವರು ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರು ನಿಧನರಾದ ಸುದ್ದಿ ತಿಳಿದು ದುಃಖವಾಗಿದೆ ಎಂದು ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ರಾಜಕಾರಣ ಮಾತ್ರವಲ್ಲದೆ ಶಿಕ್ಷಣ, ಉದ್ಯಮ, ಸಮಾಜಸೇವೆ ಕ್ಷೇತ್ರಗಳಲ್ಲಿಯೂ ಯಶಸ್ಸುಗಳಿಸಿ ಮಾದರಿ ವ್ಯಕ್ತಿತ್ವದ ಸಾಧಕರಾಗಿದ್ದರು. ಅವರ ಅಗಲಿಕೆ ನಾಡಿಗೆ ಬಹುದೊಡ್ಡ ನಷ್ಟವಾಗಿದೆ ಎಂದಿದ್ದಾರೆ.
ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ, ಕುಟುಂಬದ ಸದಸ್ಯರು ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.





Leave a comment