SUDDIKSHANA KANNADA NEWS/DAVANAGERE/DATE:14_12_2025
ದಾವಣಗೆರೆ: ಕರ್ನಾಟಕ ವಿಧಾನಸಭೆಯ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರು ನಿಧನರಾಗಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 15ರಂದು ನಡೆಯಬೇಕಿದ್ದ ದಾವಣಗೆರೆ ವಿಶ್ವವಿದ್ಯಾನಿಲಯದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಈ ದಿನಾಂಕದಂದು ನಡೆಯಬೇಕಿದ್ದ ಪರೀಕ್ಷೆಯ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಸಚಿವ (ಪರೀಕ್ಷಾಂಗ) ಪ್ರೊ. ಸಿ. ಕೆ. ರಮೇಶ್ ತಿಳಿಸಿದ್ದಾರೆ.





Leave a comment