Home ದಾವಣಗೆರೆ ವೀರಶೈವ ಲಿಂಗಾಯತ ಸಮಾಜದ ಹಿರಿಯ ನಾಯಕನ ಯುಗಾಂತ್ಯ: ಬಿ. ಎಸ್. ಯಡಿಯೂರಪ್ಪ
ದಾವಣಗೆರೆನವದೆಹಲಿಬೆಂಗಳೂರು

ವೀರಶೈವ ಲಿಂಗಾಯತ ಸಮಾಜದ ಹಿರಿಯ ನಾಯಕನ ಯುಗಾಂತ್ಯ: ಬಿ. ಎಸ್. ಯಡಿಯೂರಪ್ಪ

Share
Share

SUDDIKSHANA KANNADA NEWS/DAVANAGERE/DATE:14_12_2025

ಬೆಂಗಳೂರು: ಹಿರಿಯ ನಾಯಕರು, ಮಾಜಿ ಸಚಿವರು, ಜನಪ್ರಿಯ ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರು, ಅತ್ಯಂತ ಆತ್ಮೀಯರೂ ಆಗಿದ್ದ ಶಾಮನೂರು ಶಿವಶಂಕರಪ್ಪನವರ ನಿಧನ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಅವರ ನಿಧನದಿಂದ ನಾಡು ಒಬ್ಬ ಹಿರಿಯ ರಾಜಕಾರಣಿಯನ್ನು ಕಳೆದುಕೊಂಡಿದೆ. ವಿಶೇಷವಾಗಿ ವೀರಶೈವ ಲಿಂಗಾಯತ ಸಮಾಜದ ಹಿರಿಯ ನಾಯಕನ ಯುಗಾಂತ್ಯವಾಗಿದೆ ಎಂದು ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಶಿಕ್ಷಣ, ಆರೋಗ್ಯ ಮತ್ತು ಸಮಾಜ ಸೇವೆಯ ಮೂಲಕ ಲಕ್ಷಾಂತರ ಜನರ ಬದುಕನ್ನು ಬೆಳಗಿದ್ದ, ಶಾಮನೂರು ಶಿವಶಂಕರಪ್ಪನವರ ದಶಕಗಳ ಸುದೀರ್ಘ ಸೇವೆ, ಜನಪರ ಕಾಳಜಿ ಮತ್ತು ಸಾಧನೆಗಳು ಮಾದರಿಯಾಗಿದೆ ಎಂದು
ಬಣ್ಣಿಸಿದ್ದಾರೆ.

ಶಿವಶಂಕರಪ್ಪರ ಅವರ ಅಗಲಿಕೆಯಿಂದ ರಾಜ್ಯ ರಾಜಕಾರಣಕ್ಕೆ, ಅದರಲ್ಲೂ ವಿಶೇಷವಾಗಿ ದಾವಣಗೆರೆ ಜಿಲ್ಲೆಗೆ ಮತ್ತು ವೀರಶೈವ ಲಿಂಗಾಯತ ಮಹಾಸಭೆಗೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದ್ದಾರೆ.

ಅವರೊಂದಿಗಿನ ದಶಕಗಳ ಒಡನಾಟ, ಸಮಾಜದ ಒಗ್ಗಟ್ಟಿಗಾಗಿ ಅವರ ತುಡಿತ, ಅವರ ನಿರಂತರ ಪ್ರಯತ್ನಗಳನ್ನು ಹತ್ತಿರದಿಂದ ಕಂಡಿದ್ದೇನೆ. ವೈಯಕ್ತಿಕವಾಗಿ ಒಬ್ಬ ಆತ್ಮೀಯ ಹಿರಿಯಣ್ಣನನ್ನು ಕಳೆದುಕೊಂಡಿದ್ದೇನೆ. ಭಗವಂತನು ಅವರ ಆತ್ಮಕ್ಕೆ ಸದ್ಗತಿ ನೀಡಲಿ, ಅವರ ಕುಟುಂಬ ಸದಸ್ಯರಿಗೆ, ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *