SUDDIKSHANA KANNADA NEWS/DAVANAGERE/DATE:14_12_2025
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪರ ನಿಧನಕ್ಕೆ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಸಂತಾಪ ಸೂಚಿಸಿದ್ದಾರೆ.
ಶಿಕ್ಷಣ ಕ್ಷೇತ್ರ, ರಾಜಕೀಯ, ಆಡಳಿತ, ಸರ್ವಧರ್ಮೀಯರನ್ನು ಸಮಾನಾಗಿ ಕಾಣುವ ಸರ್ವಧರ್ಮೀಯರ ನಾಯಕರಾಗಿದ್ದ ಶಾಮನೂರು ಶಿವಶಂಕರಪ್ಪರ ದೂರದೃಷ್ಟಿತ್ವ ಅಪಾರ. ದಾವಣಗೆರೆ ಜಿಲ್ಲೆಗೆ ನೀಡಿರುವ ಕೊಡುಗೆ ಅಪಾರ ಎಂದು ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.
ಶಾಮನೂರು ಶಿವಶಂಕರಪ್ಪರು ಆರು ಬಾರಿ ಶಾಸಕರಾಗಿ, ಒಮ್ಮೆ ಸಚಿವರಾಗಿ, ಸಂಸದರಾಗಿ ಅಜಾತಶತ್ರು ರಾಜಕಾರಣಿಯಾಗಿದ್ದರು. ಉದ್ಯಮದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಶಾಮನೂರು ಶಿವಶಂಕರಪ್ಪರ ಜನೋಪಯೋಗಿ
ಕಾರ್ಯಗಳು ಎಂದೆಂದಿಗೂ ಅಜರಾಮರ. ಬಾಪೂಜಿ ವಿದ್ಯಾಸಂಸ್ಥೆ ಸೇರಿದಂತೆ ಕೈಗಾರಿಕೆ, ಶೈಕ್ಷಣಿಕ, ವೈದ್ಯಕೀಯ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಅಪಾರ ಅನುಭವ ಉಳ್ಳವರಾಗಿದ್ದ ಶಿವಶಂಕರಪ್ಪರು 95ನೇ ವಯಸ್ಸಿನಲ್ಲಿಯೂ ಜನಪರ ಕಾಳಜಿ ಹೊಂದಿದ್ದ ಅಪರೂಪದ ವ್ಯಕ್ತಿತ್ವ ಹೊಂದಿದ್ದ ಧೀಮಂತ ನಾಯಕರು ಎಂದು ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.





Leave a comment