Home ದಾವಣಗೆರೆ ದಾವಣಗೆರೆಗೆ ಶಾಮನೂರು ಶಿವಶಂಕರಪ್ಪರ ಪಾರ್ಥೀವ ಶರೀರ: ಸಾರ್ವಜನಿಕರಿಗೆ ಅಂತಿಮ ದರ್ಶನ, ಸಂಜೆ ಅಂತ್ಯಸಂಸ್ಕಾರ ವೇಳೆ ಡೀಟೈಲ್ಸ್
ದಾವಣಗೆರೆನವದೆಹಲಿಬೆಂಗಳೂರು

ದಾವಣಗೆರೆಗೆ ಶಾಮನೂರು ಶಿವಶಂಕರಪ್ಪರ ಪಾರ್ಥೀವ ಶರೀರ: ಸಾರ್ವಜನಿಕರಿಗೆ ಅಂತಿಮ ದರ್ಶನ, ಸಂಜೆ ಅಂತ್ಯಸಂಸ್ಕಾರ ವೇಳೆ ಡೀಟೈಲ್ಸ್

Share
ಶಾಮನೂರು ಶಿವಶಂಕರಪ್ಪ
Share

SUDDIKSHANA KANNADA NEWS/DAVANAGERE/DATE:15_12_2025

ದಾವಣಗೆರೆ: ಕಾಂಗ್ರೆಸ್ ಹಿರಿಯ ಮುಖಂಡ, ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪರು ವಿಧಿವಶರಾಗಿದ್ದು, ಅವರಿಗೆ 95 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಈ ಸುದ್ದಿಯನ್ನೂ ಓದಿ: ದಾವಣಗೆರೆ ಧಣಿ ಶಾಮನೂರು ಶಿವಶಂಕರಪ್ಪರು ರಾಜ್ಯ ರಾಜಕಾರಣದಲ್ಲಿ ಸೋಲಿಲ್ಲದ ಸರದಾರರಾಗಿದ್ದು ಹೇಗೆ? ಇಂಟ್ರೆಸ್ಟಿಂಗ್ ಸ್ಟೋರಿ

ದಾವಣಗೆರೆಯ ಎಂಸಿಸಿ ಬಿ ಬ್ಲಾಕ್ ನಲ್ಲಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ತೋಟಗಾರಿಕೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಡಾ ಶಾಮನೂರು ಶಿವಶಂಕರಪ್ಪನವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಯಿಂದ ರಾತ್ರಿ 11 ಗಂಟೆ ಬಳಿಕ ಹೊರ ತರಲಾಯಿತು. ಪ್ಯಾಲೇಸ್ ರಸ್ತೆಯ ವೀರಶೈವ ಮಹಾಸಭಾಕ್ಕೆ ತರಲಾಗಿತ್ತು. ಗೌರವ ಸಮರ್ಪಣೆ ನಂತರ ಸದಾಶಿವ ನಗರದ ಮನೆಯಲ್ಲಿ ಪೂಜೆ ನೆರವೇರಿಸಲಾಯಿತು. ಇಂದೇ ರಾತ್ರಿ ದಾವಣಗೆರೆ ಮನೆಗೆ ಪಾರ್ಥಿವ ಶರೀರ ತೆಗೆದುಕೊಂಡು ಹೊರಡಲಾಯಿತು.

ಇಂದು ದಾವಣಗೆರೆಯ ಎಂಸಿಸಿ ಬಿ ಬ್ಲಾಕ್ ನ ಮನೆಯಲ್ಲಿ ಬೆಳೆಗ್ಗೆ 7 ಗಂಟೆಯಿಂದ 10.30 ಗಂಟೆಯವರೆಗೆ ಪೂಜೆ ಹಾಗೂ ಕುಟುಂಬಸ್ಥರಿಗೆ ದರ್ಶನದ ವ್ಯವಸ್ಥೆ ಮಾಡಲಾಗಿದೆ.

ಸಾರ್ವಜನಿಕರಿಗೆ ಅಂತಿಮದರ್ಶನ:

ದಾವಣಗೆರೆ ಹೈ ಸ್ಕೂಲ್ ಮೈದಾನದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಅಂತಿಮ ವಿಧಿವಿಧಾನ:

ಸೋಮವಾರ ಸಂಜೆ 4.30 ಗಂಟೆಗೆ ಅಂತಿಮ ವಿಧಿವಿಧಾನಗಳನ್ನು ದಾವಣಗೆರೆಯ ಬಂಬೂಬಜಾರ್ ರಸ್ತೆಯ ಕಲ್ಲೇಶ್ವರ ಮಿಲ್ ಆವರಣದಲ್ಲಿ ನೆರವೇರಿಸಲಾಗುವುದು. ಇನ್ನು ಪಾರ್ವತಮ್ಮ ಶಿವಶಂಕರಪ್ಪರ ಸಮಾಧಿ ಕೂಡ ಇಲ್ಲೇ ಇದ್ದು, ವೀರಶೈವ ಲಿಂಗಾಯತ ಸಂಪ್ರದಾಯದಂತೆ ಸೂರ್ಯ ಮುಳುಗುವುದೊರಳಗೆ ಶಾಮನೂರು ಶಿವಶಂಕರಪ್ಪರ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

 

Share

Leave a comment

Leave a Reply

Your email address will not be published. Required fields are marked *