Home ದಾವಣಗೆರೆ ದಾವಣಗೆರೆಗೆ ಬ್ರಾಂಡ್ ಹೆಸರು ಕೊಟ್ಟವರು ಶಾಮನೂರು ಶಿವಶಂಕರಪ್ಪ: ಸಿಎಂ ಸಿದ್ದರಾಮಯ್ಯ ಗುಣಗಾನ
ದಾವಣಗೆರೆನವದೆಹಲಿಬೆಂಗಳೂರು

ದಾವಣಗೆರೆಗೆ ಬ್ರಾಂಡ್ ಹೆಸರು ಕೊಟ್ಟವರು ಶಾಮನೂರು ಶಿವಶಂಕರಪ್ಪ: ಸಿಎಂ ಸಿದ್ದರಾಮಯ್ಯ ಗುಣಗಾನ

Share
Share

SUDDIKSHANA KANNADA NEWS/DAVANAGERE/DATE:15_12_2025

ಬೆಳಗಾವಿ: ಜವಳಿ ಕ್ಷೇತ್ರದ ಅವನತಿ ಪ್ರಾರಂಭವಾದಾಗ ದಾವಣಗೆರೆಗೆ ಒಂದು ಬ್ರಾಂಡ್ ಹೆಸರನ್ನು ಶ್ಯಾಮನೂರರು ತಂದುಕೊಟ್ಟರು. ದೀರ್ಘಕಾಲ ಎಐಸಿಸಿ ಖಜಾಂಚಿ ಆಗಿದ್ದರು. ಎಲ್ಲರೊಂದಿಗೂ ಸ್ನೇಹ ಸಂಪಾದಿಸಿದ್ದವರು ಅಜಾತಶತ್ರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು ಎಂದು ಸಿಎಂ ಸಿದ್ದರಾಮಯ್ಯ ಗುಣಗಾನ ಮಾಡಿದರು.

ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಇಂದು ಮಂಡಿಸಲಾದ ಸಂತಾಪ ಸೂಚನಾ ನಿರ್ಣಯವನ್ನು ಬೆಂಬಲಿ ಅವರು ಮಾತನಾಡಿದರು.

ದಾವಣಗೆರೆಗೆ ಭೇಟಿ ನೀಡಿದಾಗಲೆಲ್ಲ ಅವರ ಗೆಸ್ಟ್ ಹೌಸ್ ನಲ್ಲಿ ಉಳಿಯುತ್ತಿದ್ದು, ಅವರ ಒತ್ತಾಯದ ಮೇರೆಗೆ ಅವರ ಮನೆಯಲ್ಲಿಯೇ ಊಟ ಮಾಡುತ್ತಿದ್ದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು. ತಮ್ಮ 75ನೇ ಜನ್ಮದಿನವನ್ನು ದಾವಣಗೆರೆಯಲ್ಲಿಯೇ ಆಚರಿಸಿಕೊಂಡಿದ್ದನ್ನು ಅವರು ಇದೇ ಸಂದರ್ಭದಲ್ಲಿ ನೆನಪಿಸಿಕೊಂಡರು.

ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದಾರೆ ಅದಕ್ಕೆ ಶ್ಯಾಮನೂರು ಶಿವಶಂಕರಪ್ಪ ಅವರು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶ್ಯಾಮನೂರು ಶಿವಶಂಕರಪ್ಪ ಅವರು ತಮ್ಮ 63 ನೇ ವಯಸ್ಸಿನಲ್ಲಿ ವಿಧಾನಸಭೆ ಪ್ರವೇಶಿಸಿ ಆರು ಬಾರಿ ಶಾಸಕರಾದವರು. ಒಮ್ಮೆ ಸಂಸತ್ ಸದಸ್ಯರಾಗಿದ್ದರು. ದೀರ್ಘ ಕಲಾ ರಾಜಕೀಯದಲ್ಲಿದ್ದರು ಎಂದರು. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದರು. 1969ರಲ್ಲಿ ದಾವಣಗೆರೆ ಪುರಸಭೆ ಸದಸ್ಯರಾಗಿ ನಂತರ ನಗರಸಭೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು ಎಂದರು.

ದಾವಣಗೆರೆಯಲ್ಲಿ ಬಾಪೂಜಿ ವಿದ್ಯಾ ಕೇಂದ್ರದ ಮೂಲಕ ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳು ಸೇರಿದಂತೆ ಅನೇಕ ಸಂಸ್ಥೆಗಳನ್ನು ಕಟ್ಟಿ ಜಿಲ್ಲೆಯನ್ನು ವಿದ್ಯಾಖಾಶಿಯಾಗಿಸಿದರು. ಉದ್ಯಮಿಯಾಗಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ ಎಂದರು.

Share

Leave a comment

Leave a Reply

Your email address will not be published. Required fields are marked *