ಬೆಳಗಾವಿ: ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಕಷ್ಟದ ಸಂದರ್ಭಗಳಲ್ಲಿ ಜನರಿಗೆ ಸಹಾಯಹಸ್ತ ಚಾಚುತ್ತಿದ್ದರು. ಕೋವಿಡ್ ಸಂದರ್ಭದಲ್ಲಿ ಆರು ಕೋಟಿಗೂ ಹೆಚ್ಚು ವೆಚ್ಚ ಮಾಡಿ ಆಕ್ಸಿಜನ್ ಸರಬರಾಜು ಮಾಡಿದ್ದರು. ಈ ಮೂಲಕ ದಾವಣಗೆರೆಯಲ್ಲಿ ಸಂಜೀವಿನಿ ಪುತ್ರ ಎನಿಸಿಕೊಂಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಇಂದು ಮಂಡಿಸಲಾದ ಸಂತಾಪ ಸೂಚನಾ ನಿರ್ಣಯವನ್ನು ಬೆಂಬಲಿ ಅವರು ಮಾತನಾಡಿದರು.
ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಮಂತ್ರಿ ಮಂಡಲದಲ್ಲಿ ಶ್ಯಾಮನೂರು ಶಿವಶಂಕರಪ್ಪ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದರು 2016ರಲ್ಲಿ ಸಂಪುಟ ಪುನರ್ ರಚನೆಯಾದಾಗ ಅವರ ಪುತ್ರ ಎಸ್ ಎಸ್ ಮಲ್ಲಿಕಾರ್ಜುನ್ ಅವರನ್ನು ಸಚಿವರನ್ನಾಗಿ ಮಾಡಲು ಕೋರಿಕೊಂಡಿದ್ದರು. ಮಲ್ಲಿಕಾರ್ಜುನ್ ಅವರು ನಮ್ಮ ಈಗಿನ ಸಚಿವ ಸಂಪುಟದಲ್ಲಿ ಮಂತ್ರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಸ್ಮರಿಸಿದರು.
15 ದಿನಗಳ ಹಿಂದೆ ಆಸ್ಪತ್ರೆಯಲ್ಲಿ ಆಸ್ಪತ್ರೆಯಲ್ಲಿ ಅವರನ್ನು ಭೇಟಿ ಮಾಡಿದಾಗ ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಅವರ ನಿಧನದಿಂದ ಜನಪರ ನಾಯಕನನ್ನು ಕಳೆದುಕೊಂಡಂತಾಗಿದೆ. ಅವರ ದೊಡ್ಡ ಕುಟುಂಬ ಹಾಗೂ ಲಕ್ಷಾಂತರ ಅಭಿಮಾನಿಗಳನ್ನು ಅಗಲಿದ್ದು ಭಗವಂತ ಅವರಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಹಾಗೂ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಮುಖ್ಯಮಂತ್ರಿಗಳು ತಮ್ಮ ಸಂತಾಪದಲ್ಲಿ ತಿಳಿಸಿದರು.





Leave a comment