ದಾವಣಗೆರೆ: ಹಿರಿಯ ನಾಯಕರು, ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಆಗಿದ್ದ ಶಾಮನೂರು ಶಿವಶಂಕರಪ್ಪನವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಪಡೆದರು.
ಗೌರವ ನಮನಗಳೊಂದಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅವರು, ನಂತರ ಕುಟುಂಬದ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.
ಶಾಮನೂರು ಶಿವಶಂಕರಪ್ಪನವರು ಭೌತಿಕವಾಗಿ ನಮ್ಮೊಂದಿಗೆ ಇರದಿದ್ದರೂ, ಅವರ ಆತ್ಮೀಯತೆಯ ವ್ಯಕ್ತಿತ್ವ, ಸಾರ್ವಜನಿಕ ಜೀವನದಲ್ಲಿ ಅವರ ಸಾಧನೆ, ಬದ್ಧತೆ, ನಿಸ್ವಾರ್ಥ ಸೇವೆ, ಸ್ಫೂರ್ತಿದಾಯಕ ಜೀವನದಿಂದಾಗಿ ಸದಾ ಸ್ಮರಣೀಯರಾಗಿರುತ್ತಾರೆ
ಎಂದು ಹೇಳಿದರು.





Leave a comment