SUDDIKSHANA KANNADA NEWS/DAVANAGERE/DATE:16_12_2025
ಬೆಳಗಾವಿ: 2023 ರಂತೆ 2028 ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ , ವಿರೋಧಪಕ್ಷದವರ ಪ್ರಶ್ನೆಗೆ ಉತ್ತರಿಸುತ್ತಾ ಮಾತನಾಡಿದರು.
ಗಾದೆ ಮಾತೆನಂತೆ ಉರಿಯುವುದರ ಮೇಲೆ ಉಪ್ಪು ಹಾಕಬಾರದೆಂಬ ಎಂಬ ಗಾದೆ ಮಾತಿದೆ. ವಿರೋಧಪಕ್ಷದವರು ಇರುವುದೇ ಉರಿಯುವುದರ ಮೇಲೆ ಉಪ್ಪು ಸುರಿಯಲು ಎಂದರು. ವಿರೋಧಪಕ್ಷದವರು ಏನೇ ಪ್ರಚೋದನೆ ಮಾಡಿದರೂ, ನಮ್ಮ ಶಾಸಕರಾರೂ ಪ್ರಚೋದಿತರಾಗುವುದಿಲ್ಲ. ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿರಬೇಕೆಂದು ಜನರು ಆಶೀರ್ವಾದ ಮಾಡಿ ಕಳಿಸಿದ್ದಾರೆ. 140 ಶಾಸಕರು ನಮ್ಮೊಂದಿಗಿದ್ದಾರೆ. ವಿರೋಧಪಕ್ಷದವರು ಇದರಲ್ಲಿ ಹುಳಿ ಹಿಂಡುವ ಅಗತ್ಯವಿಲ್ಲ ಎಂದರು.
ಜನರ ನಾಡಿಮಿಡಿತ ಕಾಂಗ್ರೆಸ್ ಸರ್ಕಾರಕ್ಕೆ ತಿಳಿದಿದೆ
2023 ರಲ್ಲಿ ಜನರು ಆಶೀರ್ವಾದ ಮಾಡಿದಂತೆ 2028 ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಆಡಳಿತಕ್ಕೆ ಬರಲಿದೆ. ಜನರ ನಾಡಿಮಿಡಿತ ಸರ್ಕಾರಕ್ಕೆ ತಿಳಿದಿದೆ. ಕರ್ನಾಟಕದ ಜನ ಬಿಜೆಪಿಗೆ ಎಂದಿಗೂ ಅಧಿಕಾರಕ್ಕೆ ತರುವುದಿಲ್ಲ.
ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಎರಡು ಬಾರಿ ಅಧಿಕಾರ ನಡೆಸಿದರೂ, ಒಂದು ಬಾರಿಯೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿಲ್ಲ. 2008 , 2018 ರಲ್ಲಿ ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ರಾಜ್ಯದ ಜನ ಬಿಜೆಪಿಗೆ ಆಶೀರ್ವಾದ ಮಾಡುವುದಿಲ್ಲ ಎಂಬುದು ಸ್ಪಷ್ಟವಾಗಿದೆ. 2019 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬಾರದೆಂಬ ಉದ್ದೇಶದಿಂದ ಜೆಡಿಎಸ್ ನೊಂದಿಗೆ ಸರ್ಕಾರ ರಚಿಸಲಾಯಿತು. ಆದರೆ ಬಿಜೆಪಿಯವರು , ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಉದ್ದೇಶದ ಬಗ್ಗೆ ಪ್ರಶ್ನಿಸಿದರು.





Leave a comment