ಬೆಳಗಾವಿ: “‘ನಾನು’ ಹೋದರೆ ಹೋದೇನು” ಅಂತ ಕನಕದಾಸರು ಹೇಳಿದ್ದರು. “ಇದು ನನ್ನ ಸರ್ಕಾರವಲ್ಲ, ನಮ್ಮ ಸರ್ಕಾರ”. ಈಗಲೂ ನಾನೇ ಮುಖ್ಯಮಂತ್ರಿ. ಹೈಕಮಾಂಡ್ ಹೇಳುವ ತನಕವೂ ನಾನೇ ಮುಖ್ಯಮಂತ್ರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಐದು ವರ್ಷ ಸುಭದ್ರ ಸರ್ಕಾರ ನೀಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷದಲ್ಲಿ ಹೈಕಮಾಂಡ್ ಮಾತು ಅಂತಿಮವಾಗಿರುತ್ತದೆ. ಆದರೆ ಬಿಜೆಪಿಯ ಅಧ್ಯಕ್ಷಗಿರಿ ಆಯ್ಕೆಯಲ್ಲಿ ಒಮ್ಮತ ಸಾಧಿಸಿಲ್ಲ. ಬಿಜೆಪಿಯವರಿಗೆ ಅಸೂಯೆ ಕಾಡುತ್ತಿದೆ. ಐದು ವರ್ಷ ಸುಭದ್ರ ಸರ್ಕಾರ ನೀಡುತ್ತೇವೆ ಹಾಗೂ ಮತ್ತೆ ಚುನಾವಣೆ ಎದುರಿಸಿ 2028 ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಅಧಿಕ್ಆರಕ್ಕೆ ಬರಲಿದೆ . 2013 ರಲ್ಲಿ 2023 ರಲ್ಲಿಯೂ ಕಾಂಗ್ರೆಸ್ ಗೆ ಜನರು ಆಶೀರ್ವಾದ ಮಾಡಿದ್ದಾರೆ, ಆದರೆ ಬಿಜೆಪಿಯವರಿಗೆ ಒಮ್ಮೆಯೂ ಜನಾದೇಶ ದೊರೆತಿಲ್ಲ ಹಾಗೂ ಭವಿಷ್ಯದಲ್ಲಿಯೂ ದೊರೆಯುವುದಿಲ್ಲ. ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದೆ ಎಂದು ಹೇಳಿದರು.





Leave a comment