ನವದೆಹಲಿ: ಕೋಲ್ಕತ್ತಾದ ಆರ್.ಜಿ ಕರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯೆಲ್ಲಿ ನಡೆದಿದ್ದ ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಮ್ ಕೋರ್ಟ್ ಈ ಬಗ್ಗೆ ತನಿಖೆ ಮಾಡಿ ವರದಿ ಸಲ್ಲಿಸುವಂತೆ ಸಿಬಿಐಗೆ ಆದೇಶ ನೀಡಿದೆ. ಇಂದು ಪ್ರಕರಣದ ಕುರಿತು ವಿಚಾರಣೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರನ್ನು ಒಳಗೊಂಡ ತ್ರಿಸದಸ್ಯ ಪೀಠವು ಈ ಆದೇಶ ನೀಡಿದೆ. ಜೊತೆಗೆ ಪ್ರಕರಣ ನಡೆದ ಕೋಲ್ಕತ್ತದ ಆರ್.ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಸಿಐಎಸ್ಎಫ್ ಸಿಬ್ಬಂದಿಯನ್ನು ರಕ್ಷಣೆಗಾಗಿ ನಿಯೋಜಿಸಲು ಆದೇಶ ನೀಡಿದೆ.