Home ಉದ್ಯೋಗ ವಾರ್ತೆ ಸ್ಥಳೀಯ ಸಂಸ್ಥೆಗಳಲ್ಲಿನ ನೇರ ನೇಮಕಾತಿಯಲ್ಲಿ ಖಾಲಿ ಹುದ್ದೆಗಳಿಗೆ ಆರ್ಥಿಕ ಇಲಾಖೆ ಅನುಮೋದನೆ ಬಳಿಕ ಭರ್ತಿ
ಉದ್ಯೋಗ ವಾರ್ತೆದಾವಣಗೆರೆಬೆಂಗಳೂರು

ಸ್ಥಳೀಯ ಸಂಸ್ಥೆಗಳಲ್ಲಿನ ನೇರ ನೇಮಕಾತಿಯಲ್ಲಿ ಖಾಲಿ ಹುದ್ದೆಗಳಿಗೆ ಆರ್ಥಿಕ ಇಲಾಖೆ ಅನುಮೋದನೆ ಬಳಿಕ ಭರ್ತಿ

Share
Share

ಬೆಳಗಾವಿ: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ನೇರ ನೇಮಕಾತಿಯಡಿ ಖಾಲಿ ಇರುವ ಹುದ್ದೆಗಳನ್ನು ಆರ್ಥಿಕ ಇಲಾಖೆಯ ಅನುಮೋದನೆ ಪಡೆದ ನಂತರ ಕರ್ನಾಟಕ ಲೋಕ ಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ತಿಳಿಸಿದ್ದಾರೆ.

ಅಧಿವೇಶನದಲ್ಲಿ ಮಾತನಾಡಿದ ಅವರು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಸೇವಾ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸುವ ಕುರಿತು ಪೌರ ನೌಕರರ ಸಂಘಗಳ ವತಿಯಿಂದ ಮನವಿಗಳು ಸ್ವೀಕೃತವಾಗಿದ್ದು, ಪರಿಶೀಲನಾ ಹಂತದಲ್ಲಿರುತ್ತದೆ ಎಂದು ಹೇಳಿದ್ದಾರೆ.

ನಗರ ಕೆ.ಜಿ.ಐ.ಡಿ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಸೇವಾ ನೌಕರರಿಗೆ ಹಾಗೂ ಜ್ಯೋತಿ ಸಂಜೀವಿನಿ ಸೌಲಭ್ಯಗಳನ್ನು ಒದಗಿಸಲು ನಿಯಮಗಳಲ್ಲಿ ಅವಕಾಶವಿರುವುದಿಲ್ಲ. ಮುಂದುವರೆದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಕೌಂಟೆಂಡ್, ಜೂನಿಯರ್/ಸೀನಿಯರ್, ಪ್ರೋಗ್ರಾಮರ್‌ ವಾಹನ ಚಾಲಕರು, ಪ್ಲೆಂಬರ್ ಹಾಗೂ ಇತ್ಯಾದಿ ಹುದ್ದೆಗಳನ್ನು ಅವಶ್ಯಕತೆಗನುಗುಣವಾಗಿ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಮಟ್ಟದಲ್ಲಿ ನೇಮಕಾತಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ. ಅದರಂತೆ ಜಿಲ್ಲಾ ಮಟ್ಟದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ನೇಮಕಾತಿ ಮಾಡಿಕೊಳ್ಳಲು ಕ್ರಮವಹಿಸಲಾಗುತ್ತಿದೆ
ಎಂದು ಮಾಹಿತಿ ನೀಡಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಹೇಮಲತಾ ನಾಯಕ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪೌರಾಡಳಿತ ಸಚಿವರಾದ ರಹೀಂ ಖಾನ್‌ ಅವರ ಉತ್ತರ ನೀಡಿದರು.

Share

Leave a comment

Leave a Reply

Your email address will not be published. Required fields are marked *