Home ದಾವಣಗೆರೆ ಸಹಕಾರ ಸಂಘ ಸಿಬ್ಬಂದಿಗಳ ತರಬೇತಿಗೆ ಅರ್ಜಿ ಆಹ್ವಾನ
ದಾವಣಗೆರೆಬೆಂಗಳೂರು

ಸಹಕಾರ ಸಂಘ ಸಿಬ್ಬಂದಿಗಳ ತರಬೇತಿಗೆ ಅರ್ಜಿ ಆಹ್ವಾನ

Share
Share

ದಾವಣಗೆರೆ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ರಾಜ್ಯದ ಬೆಂಗಳೂರು, ಮೈಸೂರು, ಮಡಿಕೇರಿ, ಮೂಡಬಿದ್ರೆ, ಶಿವಮೊಗ್ಗ, ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಸ್ಥಳಗಳಲ್ಲಿ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ ಸಂಸ್ಥೆಗಳನ್ನು ನಡೆಸುತ್ತಿದೆ.

ಈ ತರಬೇತಿ ಸಂಸ್ಥೆಗಳ ಮೂಲಕ ಸಹಕಾರ ಸಂಘ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತರಬೇತಿ ಹೊಂದದೇ ಇರುವ ಸಿಬ್ಬಂದಿಗಳಿಗೆ “6 ತಿಂಗಳು /180 ದಿನಗಳ” ಅವಧಿಯ ದೂರಶಿಕ್ಷಣ “ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್”
ತರಬೇತಿಯನ್ನು 2026 ರ ಜನವರಿ ಮಾಹೆಯಿಂದ ಪ್ರಾರಂಭವಾಗಲಿದೆ.

ತರಬೇತಿಗಾಗಿ ಅರ್ಜಿ ಸಲ್ಲಿಸಲು ಕೊನೆಯ ಡಿಸೆಂಬರ್ 25. ಅರ್ಜಿ ಫಾರಂ ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ., #2532, “ಕಲಾಪ್ರಕಾಶ ವೃಂದ”, 1ನೇ ಮಹಡಿ, ವಿನೋಬನಗರ 2ನೇ ಮುಖ್ಯರಸ್ತೆ, ಎಂ.ಸಿ.ಸಿ ‘ಎ’
ಬ್ಲಾಕ್, ದಾವಣಗೆರೆ ಈ ಸಂಸ್ಥೆಯಿಂದ ಪಡೆಯಬಹುದು ಎಂದು ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತದ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles