ಈವರೆಗೆ ದೇಶದಲ್ಲಿ ಒಂದೇ ಒಂದು ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿಲ್ಲ. ಆದರೂ ರಾಜ್ಯ ಸರ್ಕಾರದಿಂದ ಈಗಾಗಲೇ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವರು ಈವರೆಗೆ ದೇಶದಲ್ಲಿ ಒಂದೇ ಒಂದು ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿಲ್ಲ. ಆದರೂ ರಾಜ್ಯ ಸರ್ಕಾರದಿಂದ ಈಗಾಗಲೇ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಕೇಂದ್ರದಿಂದ ಅಧಿಕೃತ ಮಾರ್ಗಸೂಚಿ ಬರದೇ ಇದ್ದರೂ ರಾಜ್ಯ ಆರೋಗ್ಯ ಇಲಾಖೆಯಿಂದ ಜಿಲ್ಲಾ ಆರೋಗ್ಯ ಕೇಂದ್ರಗಳವರೆಗೂ ಮುನ್ನೆಚ್ಚರಿಕೆ ನೀಡಲಾಗಿದೆ. ನಾಡಿನ ಜನರು ಗಾಬರಿಪಡುವ ಅವಶ್ಯಕತೆ ಇಲ್ಲ ಎಂದು ಅವರು ಹೇಳಿದ್ದಾರೆ.