Home ಉದ್ಯೋಗ ವಾರ್ತೆ ಎಸ್ ಎಸ್ ಎಲ್ ಸಿ ಪಾಸ್ ಆದವರಿಗೆ ಅವಕಾಶ: ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನ
ಉದ್ಯೋಗ ವಾರ್ತೆದಾವಣಗೆರೆಬೆಂಗಳೂರು

ಎಸ್ ಎಸ್ ಎಲ್ ಸಿ ಪಾಸ್ ಆದವರಿಗೆ ಅವಕಾಶ: ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನ

Share
Share

ದಾವಣಗೆರೆ: ಭಾರತ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಕೇಂದ್ರ ಸಶಸ್ತ್ರ ಪೊಲೀಸ್ (CAPF), ಎಸ್‌ಎಸ್‌ಎಫ್ ಪಡೆಗಳಲ್ಲಿ ಕಾನ್ಸ್ಟೇಬಲ್ (GD)ಹಾಗೂ ಅಸ್ಸಾಂ ರೈಫಲ್‌ನಲ್ಲಿ ರೈಫಲ್ ಮ್ಯಾನ್(GD)ಹುದ್ದೆಗಳ ಭರ್ತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಅರ್ಜಿ ಅಹ್ವಾನಿಸಲಾಗಿದೆ.

10ನೇ ತರಗತಿ ಉತ್ತೀರ್ಣರಾಗಿರುವವರು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿದ, 18 ರಿಂದ 23ವರ್ಷಗಳ ವಯೋಮಿತಿವುಳ್ಳವರು (ಎಸ್.ಸಿ/ಎಸ್.ಟಿ/ಓಬಿಸಿ/ಇಎಸ್‌ಎಂ ವರ್ಗದವರಿಗೆ ನಿಯಮಾನುಸಾರ ಸಡಿಲಿಕೆ ಇದೆ) ವೆಬೆಸೈಟ್ https://ssc.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ಡಿಸೆಂಬರ್ 31 ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-25502520/2557342 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ. ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *