Home ದಾವಣಗೆರೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ: ಬಿಪಿಎಲ್ ಕಾರ್ಡ್ ಆದಾಯ ಮಿತಿ ಪರಿಷ್ಕರಣೆ!
ದಾವಣಗೆರೆನವದೆಹಲಿಬೆಂಗಳೂರುವಾಣಿಜ್ಯ

ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ: ಬಿಪಿಎಲ್ ಕಾರ್ಡ್ ಆದಾಯ ಮಿತಿ ಪರಿಷ್ಕರಣೆ!

Share
Share

SUDDIKSHANA KANNADA NEWS/DAVANAGERE/DATE:19_12_2025

ಬೆಳಗಾವಿ: ರಾಜ್ಯ ಸರ್ಕಾರ ಬಿಪಿಎಲ್‌ ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ.

ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್‍ದಾರರ ಆದಾಯ ಮಿತಿಯನ್ನು ₹1.20 ಲಕ್ಷಕ್ಕೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ ₹500 ಕೂಲಿ ದೊರೆಯುತ್ತದೆ. ಇದರ ಆಧಾರದಲ್ಲಿ ಕೂಲಿ ಮಾಡುವವರ ಆದಾಯವೂ ವರ್ಷಕ್ಕೆ ₹1.80 ಲಕ್ಷಕ್ಕೂ ಅಧಿಕವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪರಿಷ್ಕರಿಸಲು ಚಿಂತನೆ ನಡೆದಿದೆ.

ಕೇಂದ್ರ ಸರ್ಕಾರ ರಾಜ್ಯದಲ್ಲಿ 7,75,206 ಶಂಕಾಸ್ಪದ ಪಡಿತರ ಫಲಾನುಭವಿಗಳನ್ನು ಗುರುತಿಸಿದೆ. ರಾಜ್ಯದಲ್ಲಿ 4.53 ಲಕ್ಷ ಬಿಪಿಎಲ್‌ ಹಾಗೂ 1.25 ಲಕ್ಷ ಎಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿವೆ. ರಾಜ್ಯದ ಜನಸಂಖ್ಯೆಗೆ ಹೊಲಿಸಿದರೆ ಶೇ.73 ರಷ್ಟು ಕುಟುಂಬಗಳು ಬಿಪಿಎಲ್ ಕಾರ್ಡು ಪಡೆದಿವೆ. ರಾಜ್ಯವು ಜಿಎಸ್‌ಟಿ ಪಾವತಿ, ಆದಾಯ ತೆರಿಗೆ ಪಾವತಿಯಲ್ಲಿ ದೇಶದಲ್ಲಿ ಮುಂಚೂಣಿಯಲ್ಲಿದೆ. ಈ ಅಂಶವನ್ನು ಪರಿಗಣಿಸಿದರೆ ಬಿಪಿಎಲ್ ಕುಟುಂಬಗಳ ಪ್ರಮಾಣ ಶೇ.50 ರಷ್ಟು ಇರಬೇಕಿತ್ತು. ಆದರೆ ಇದಕ್ಕೂ ಹೆಚ್ಚಿನ ಕುಟುಂಬ ಬಿಪಿಎಲ್‌ ಕಾರ್ಡು ಪಡೆದಿವೆ.

ರಾಜ್ಯದಲ್ಲಿ ಆದ್ಯತಾ ಪಡಿತರ ಚೀಟಿಗಳನ್ನು ಪಡೆಯುವ ಹಾಗೂ ಹೊರಗಿಡುವ ಬಗ್ಗೆ 2017ರಲ್ಲಿ ಮಾನದಂಡಗಳನ್ನು ರೂಪಿಸಿದೆ. ಇದರ ಅನ್ವಯ ಸರ್ಕಾರಿ, ಅನುದಾನಿತ ಸಂಸ್ಥೆಗಳು, ಮಂಡಳಿ, ನಿಗಮ, ಸ್ವಾಯತ್ತ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ನೌಕರರು, ಆದಾಯ, ಸೇವಾ ಹಾಗೂ ಜಿಎಸ್‌ಟಿ ತೆರಿಗೆ ಪಾವತಿ ಮಾಡುವ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್ ನೀಡುವುದಿಲ್ಲ. ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿರುವುದರಿಂದ, ತಾತ್ಕಾಲಿಕವಾಗಿ ಯಾವುದೇ ಬಿಪಿಎಲ್‌ ಕಾರ್ಡುಗಳನ್ನು ರದ್ದು ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಸದ್ಯ ವೈದ್ಯಕೀಯ ಆಧಾರದಲ್ಲಿ ಮಾತ್ರ ಬಿಪಿಎಲ್‌ ಕಾರ್ಡು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ ಕುಟುಂಬದ ಸದಸ್ಯರು ನೌಕರಿಗೆ ಸೇರಿದ್ದಾರೆ ಎನ್ನುವ ಕಾರಣದಿಂದ ಬಿಪಿಎಲ್‌ ಕಾರ್ಡು ರದ್ದಾಗಿದ್ದರೆ, ಬಾದಿತ ಕುಟುಂಬದವರು ನೌಕರಿಗೆ ಸೇರಿದವರು ತಮ್ಮೊಂದಿಗೆ ವಾಸವಾಗಿಲ್ಲ ಎನ್ನುವ ಕಾರಣ ನೀಡಿ, ಸಂಬಂದಪಟ್ಟ ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಿದರೆ 15 ದಿನದ ಒಳಗಾಗಿ ಬಿಪಿಎಲ್‌ ಕಾರ್ಡು ನೀಡಲಾಗುವುದು.

ಬಂಟ್ವಾಳ ಕ್ಷೇತ್ರದಲ್ಲಿ 2023-24ನೇ ಸಾಲಿನವರೆಗೆ ₹48,715 ಕುಟುಂಬಗಳಿಗೆ ಬಿಪಿಎಲ್‌ ಕಾರ್ಡು ನೀಡಲಾಗಿದೆ. 2023 ರಿಂದ ಜನವರಿ 2025ವರೆಗೆ ಒಟ್ಟು 688 ಬಿಪಿಎಲ್‌ ಕಾರ್ಡು ವಿತರಿಸಲಾಗಿದೆ. 99 ಕುಟುಂಬಗಳ ಬಿಪಿಎಲ್‌ ಕಾರ್ಡು ರದ್ದುಪಡಿಸಲಾಗಿದೆ. ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 930 ಬಿಪಿಎಲ್‌ ಕಾರ್ಡುಗಳನ್ನು ಎಪಿಎಲ್‌ ಕಾರ್ಡುಗಳಾಗಿ ಪರಿವರ್ತಿಸಲಾಗಿದೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ರಾಜೇಶ್ ನಾಯಕ್ ಹಾಗೂ ಬಾಲಕೃಷ್ಣ.ಸಿ.ಎನ್ ಅವರ ಪ್ರಶ್ನೆಗೆ ಆಹಾರ ಸಚಿವರಾದ ಕೆ.ಎಚ್‌.ಮುನಿಯಪ್ಪ ಅವರ ಉತ್ತರಿಸಿದರು.

Share

Leave a comment

Leave a Reply

Your email address will not be published. Required fields are marked *