SUDDIKSHANA KANNADA NEWS/ DAVANAGERE/ DATE:29-07-2023
ದಾವಣಗೆರೆ: ಪದವಿ ಪೂರ್ವ ಕಾಲೇಜಿ(College) ನ ಕಟ್ಟಡವೊಂದರಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯ ಸರಸ -ಸಲ್ಲಾಪದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ನಡೆದಿದೆ.
ಜಗಳೂರು ತಾಲೂಕಿನ ಗ್ರಾಮವೊಂದರ ವಿದ್ಯಾರ್ಥಿನಿ ಹಾಗೂ ದಾವಣಗೆರೆ ಮೂಲದ ವಿದ್ಯಾರ್ಥಿ ಸಾವಿಗೆ ಶರಣಾದ ಜೋಡಿ. ಸರ್ಕಾರದ ಪದವಿ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳಿಬ್ಬರು ಸರಸ ನಡೆಸಿದ್ದ ವಿಡಿಯೋವನ್ನು ಮೊಬೈಲ್ ನಲ್ಲಿ ಸೆರೆ ಹಿಡಿಯಲಾಗಿತ್ತು. ಈ ವಿಡಿಯೋ ಗ್ರಾಮ ಹಾಗೂ ಕಾಲೇಜಿನ ಯುವಕ, ಯುವತಿಯರ ವ್ಯಾಟ್ಸಪ್ ಗ್ರೂಪ್ ನಲ್ಲಿ ಹರಿದಾಡಿತ್ತು. ಈ ವಿಚಾರ ಎರಡೂ ಮನೆಯವರಿಗೆ ಗೊತ್ತಾಗಿತ್ತು. ಮಾತ್ರವಲ್ಲ, ಮುಜುಗರ ಅನುಭವಿಸಿದ್ದ ವಿದ್ಯಾರ್ಥಿಗಳಿಬ್ಬರ ಕುಟುಂಬದವರು ಶಾಕ್ ಆಗಿದ್ದರಲ್ಲದೇ, ಮಾನ, ಮರ್ಯಾದೆ ಹೋಯ್ತಲ್ಲ ಎಂಬ ಕೊರಗಿನಲ್ಲಿದ್ದರು.
ಈ ಸುದ್ದಿಯನ್ನೂ ಓದಿ:
Davanagere: ರಸ್ತೆಯಲ್ಲಿ ಹೋಗೋರಿಗೆ ಬೀಳ್ತಿತ್ತು ಚಟೀರ್, ಪಟೀರ್: 30ಕ್ಕೂ ಹೆಚ್ಚು ಜನರಿಗೆ ಯಾಕ್ ಬಿತ್ತು ಹೊಡ್ತಾ…. ಕೊನೆಗೇನಾಯ್ತು ಗೊತ್ತಾ…?
ಆದ್ರೆ, ವಿಡಿಯೋದಲ್ಲಿದ್ದ ವಿದ್ಯಾರ್ಥಿನಿ ಯಾವಾಗ ಸರಸ ಸಲ್ಲಾಪದ ವಿಡಿಯೋ ವೈರಲ್ ಆಯಿತೋ ಮನನೊಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆಯ ಮರಣೋತ್ತರ ಪರೀಕ್ಷೆ ನಡೆಸಿ ಅಂತಿಮ ವಿಧಿವಿಧಾನ ನೆರವೇರಿಸಲಾಗಿತ್ತು.
ಪರಸ್ಪರ ಪ್ರೀತಿ ಮಾಡುತ್ತಿದ್ದ ಇಬ್ಬರೂ ಕಾಲೇಜಿ(College)ನ ಕಟ್ಟಡದ ಟೆರೇಸ್ ಮೇಲೆ ಕಳೆದ ಕೆಲ ದಿನಗಳ ಹಿಂದೆ ಖಾಸಗಿ ಕ್ಷಣ ಕಳೆಯುತ್ತಿರುವುದರ ವಿಡಿಯೋ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿಯೂ ವೈರಲ್ ಆಗಿತ್ತು. ವಿಡಿಯೋ ಹರಿದಾಡುವುದು ಗೊತ್ತಾಗಗುತ್ತಿದ್ದಂತೆ ನೊಂದ ವಿದ್ಯಾರ್ಥಿನಿ ಸಾವಿಗೆ ಶರಣಾಗಿದ್ದಾಳೆ. ಇನ್ನು ಈಕೆ ಆತ್ಮಹತ್ಯೆ
ಮಾಡಿಕೊಂಡ ಸುದ್ದಿ ತಿಳಿಯುತ್ತಿದ್ದಂತೆ ವಿಡಿಯೋದಲ್ಲಿದ್ದ ಯುವಕ ಸಹ ಆತ್ಮಹತ್ಯೆಗೆ ಶರಣಾಗಿದ್ದಾನೆ. ಎರಡೂ ಕುಟುಂಬದವರ ಮನೆಯಲ್ಲಿ ನೋವು ಮಡುಗಟ್ಟಿದೆ.
ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದವರ ವಿರುದ್ಧ ದೂರು ನೀಡಿದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ಅರುಣ್ ತಿಳಿಸಿದ್ದಾರೆ. ಇನ್ನು ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ. ಎರಡೂ ಕುಟುಂಬದವರು ಪ್ರತ್ಯೇಕವಾಗಿ ದೂರು ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.